ಸೋಮವಾರ, ಜೂನ್ 16, 2025
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಜೂ.16(ಕರ್ನಾಟಕ ವಾರ್ತೆ):
ಜಿಲ್ಲೆಯ ಸಂಗನಕಲ್ಲು ಗ್ರಾಮದ ನಿವಾಸಿಯಾದ ವಿ.ನಾಗರಾಜ ಎನ್ನುವ 35 ವರ್ಷದ ವ್ಯಕ್ತಿಯು 2024 ರ ಜ.17 ರಂದು ಕಾಣೆಯಾಗಿರುವ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.
ಚಹರೆ:
ಅಂದಾಜು 6 ಅಡಿ ಎತ್ತರ, ದುಂಡು ಮುಖ, ಕಪ್ಪುü ಮೈಬಣ್ಣ, ಧೃಡವಾದ ಮೈಕಟ್ಟು ಹೊಂದಿದ್ದು, ಕಪ್ಪು ಕೂದಲು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಟಿ-ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆಯನ್ನು ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿ ಬಗ್ಗೆ ಮಾಹಿತಿ ಸಿಕ್ಕಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, 9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ