ಗುರುವಾರ, ಜೂನ್ 12, 2025

ತೋಟಗಾರಿಕೆ ಇಲಾಖೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಣ್ಣು ಮತ್ತು ನೀರಿನ ಸಂರಕ್ಷಣೆ ಕಾರ್ಯಕ್ರಮಗಳಾದ ಬದು ನಿರ್ಮಾಣ, ಕೃಷಿಹೊಂಡ, ಕಾಮಗಾರಿಗಳಿಗೆ ಸಹಾಯಧನ. ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಸಪೋಟ, ದಾಳಿಂಬೆ, ಪೇರಲ, ಮಾವು, ಡ್ರಾö್ಯಗನ್ ಹಣ್ಣು, ತೆಂಗು, ತಾಳೆ ಹಾಗೂ ಇತರೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕೂಲಿ ಮತ್ತು ಸಾಮಾಗ್ರಿ ವೆಚ್ಚವನ್ನು ಆನ್ ಲೈನ್ ಮೂಲಕ ಪಾವತಿಸುವ ವ್ಯವಸ್ಥೆಯಿದ್ದು, ಆಸಕ್ತ ರೈತರು ಅಗತ್ಯ ದಾಖಲಾತಿಗಳಾದ ಪಹಣಿ, ಆಧಾರ್ ಕಾರ್ಡ್, ಉದ್ಯೋಗ ಚೀಟಿ, ಬಿಪಿಎಲ್ ಪಡಿತರ ಚೀಟಿ ಜೆರಾಕ್ಸ್ ಪ್ರತಿ ಅಥವಾ ಎಸ್.ಸಿ ಮತ್ತು ಎಸ್.ಟಿ ಜಾತಿ ಪ್ರಮಾಣ ಪ್ರತಿ ಜೆರಾಕ್ಸ್ ಅಥವಾ ಸಣ್ಣ ರೈತರ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯ ದೂ.08392-278177 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ