ಗುರುವಾರ, ಜೂನ್ 12, 2025
ಬಳ್ಳಾರಿಯಲ್ಲಿ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’; ಗಮನ ಸೆಳೆದ ಜಾಗೃತಿ ಜಾಥಾ | ಬಾಲಕಾರ್ಮಿಕ ಪದ್ಧತಿ ತೊಡೆದಾಕಲು ಒಗ್ಗೂಡಬೇಕು: ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ):
ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಅಧಿಕಾರಿಗಳು, ಪೋಷಕರು ಹಾಗೂ ಇತರೆ ಸಂಘ-ಸAಸ್ಥೆಗಳು ಒಗ್ಗೂಡಬೇಕಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಜಿಲ್ಲಾ ವಕೀಲರ ಸಂಘ, ವಿವಿಧ ಇಲಾಖೆಗಳು ಮತ್ತು ಇತರೆ ಸಂಘ-ಸAಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಗುರುವಾರ ಏರ್ಪಡಿಸಿದ್ದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧಿಸಲಾಗಿದ್ದು, ಇಂದಿಗೂ ಬಡತನವೆನ್ನುವುದು ಅನೇಕ ಮಕ್ಕಳನ್ನು ದುಡಿಯುವಂತೆ ಮಾಡುತ್ತಿದೆ. ಬಡತನ, ಪೋಷಕರ ನಿರ್ಲಕ್ಷö್ಯದ ಕಾರಣ ವಿಶ್ವದಾದ್ಯಂತ 16 ಕೋಟಿ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಲೇ ಇದ್ದಾರೆ. ಈ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಲು ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.
ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿರುವ ಬಾಲಕಾರ್ಮಿಕತನವನ್ನು ತೊಡೆದು ಹಾಕಲು ಕೇವಲ ಸರ್ಕಾರಗಳಿಂದ ಮಾತ್ರ ಸಾಧ್ಯವಾಗದು. ಇದಕ್ಕೆ ಅಧಿಕಾರಿಗಳು, ಪೋಷಕರು, ಸಾರ್ವಜನಿಕರು ಹಾಗೂ ಇತರೆ ಸಂಘ-ಸAಸ್ಥೆಗಳು ಒಗ್ಗೂಡಿ ಕಾರ್ಯಾಚರಣೆ ನಡೆಸಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.
ಪ್ರತಿಯೊಬ್ಬರೂ ಶಿಕ್ಷಣಕ್ಕೆ ಮಹತ್ವ ನೀಡಬೇಕು. ಶಿಕ್ಷಣದಿಂದಲೇ ಮಾತ್ರ ಬಡತನ ನಿರ್ಮೂಲನೆ ಮಾಡಲು ಸಾಧ್ಯ. 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಇದೆ. ಸರ್ಕಾರಗಳು ಶಿಕ್ಷಣಕ್ಕೆ ಒತ್ತು ಮತ್ತು ಪ್ರೋತ್ಸಾಹ ನೀಡುತ್ತಿದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಸ್ತುತದಲ್ಲಿ ಮೊಬೈಲ್ ಸಾಧನವು ಮಕ್ಕಳ ಬೆಳವಣಿಗೆಗೆ ಅಡ್ಡಿಪಡಿಸುತ್ತಿದೆ. ಉತ್ತಮ ಮಾಹಿತಿ ಹೊಂದಲು ಬಳಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಸಮಾಜದ ಸತ್ಪçಜೆಯಾಗಿ ಹೊರಹೊಮ್ಮಬೇಕು ಎಂದು ನ್ಯಾಯಾಧೀಶರು ಹುರಿದುಂಬಿಸಿದರು.
ವಿದ್ಯಾರ್ಥಿಗಳು ತಮ್ಮ ಸುತ್ತ-ಮುತ್ತಲಿನ ನೆರೆಹೊರೆಯ ನಿಮ್ಮ ಸ್ನೇಹಿತರು ಹಾಗೂ ಬೇರೆ ಯಾರಾದರೂ ಬಾಲಕಾರ್ಮಿಕ ಪದ್ಧತಿಯಲ್ಲಿ ತೊಡಗಿಕೊಂಡಿದ್ದಲ್ಲಿ ಜಾಗೃತಿ ಮೂಡಿಸಬೇಕು ಎಂದು ಕಿವಿಮಾತು ಹೇಳಿದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಪ್ರಗತಿ ಸ್ಪಷ್ಟವಾಗಿದ್ದು, ಆದರೆ ಇನ್ನೂ ಹೆಚ್ಚಿನದನ್ನು ಮಾಡಬೇಕಿದೆ: ಪ್ರಯತ್ನಗಳನ್ನು ವೇಗಗೊಳಿಸೋಣ’ ಎಂಬ ಈ ವರ್ಷದ ಘೋಷವಾಕ್ಯದಂತೆ ರಾಷ್ಟç ಕಟ್ಟುವಲ್ಲಿ ಮಕ್ಕಳ ಪಾತ್ರ ಪ್ರಮುಖವಾಗಿದ್ದು, ಅಂತಹ ಮಕ್ಕಳು ಬಾಲಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಂಡು ಶಿಕ್ಷಣದಿಂದ ವಂಚಿತರಾಗಿದ್ದಲ್ಲಿ ಕಾರ್ಮಿಕ, ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಇದಕ್ಕೂ ಮುನ್ನ ಅಪರ ಜಿಲ್ಲಾಧಿಕಾರಿಯವರು ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಅಂಗವಾಗಿ ಪ್ರತಿಜ್ಞಾವಿಧಿ ಭೋದಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಅವರು ಮಾತನಾಡಿ, ಹದಿನಾಲ್ಕು ವರ್ಷದೊಳಗಿನ ವಯಸ್ಸಿನ ಮಕ್ಕಳನ್ನು ದುಡಿಸಿಕೊಳ್ಳುವುದು ಕಾನೂನು ಬಾಹಿರ. ತಮ್ಮ ಸುತ್ತ-ಮುತ್ತಲಿನಲ್ಲಿ ದುಡಿಯುವ ಮಕ್ಕಳು, ಕಿಶೋರರು ಕಂಡುಬAದಲ್ಲಿ ಸಹಾಯವಾಣಿ ಸಂಖ್ಯೆ 1098 ಅಥವಾ 112 ಗೆ ಕರೆಮಾಡಿ ಮಾಹಿತಿ ನೀಡಬಹುದು ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ವಕೀಲರು ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಸದಸ್ಯರಾದ ತ್ರಿವೇಣಿ ಪತ್ತಾರ್ ಅವರು ಭಾಗವಹಿಸಿ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಚಿಗುರು ಕಲಾ ತಂಡದ ಹುಲುಗಪ್ಪ ಅವರಿಂದ ‘ಶಾಲೆಯಿಂದ ಹೊರಗುಳಿದ ಮಗು’ವಿನ ಕುರಿತು ಗಾಯನ ಪ್ರಸ್ತುತ ಪಡಿಸಿದರು.
ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ವಿಜಯಲಕ್ಷಿö್ಮ ಮೈದೂರು, ಬಳ್ಳಾರಿ ಉಪ ವಿಭಾಗ ಕಾರ್ಮಿಕ ಅಧಿಕಾರಿ ಸಿದ್ದಪ್ಪ÷ಜಿ. ಖೈನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಅಧಿಕಾರಿ ರಾಮಕೃಷ್ಣ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ, ಕಾರ್ಯದರ್ಶಿ ಸಿ.ಎ ಗುರುಬಸವರಾಜ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್, ಕಾರ್ಮಿಕ ನಿರೀಕ್ಷಕರಾದ ಪರಶುರಾಮ್, ರಮೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
*ಜಾಗೃತಿ ಜಾಥ:*
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾವು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿವಿಧ ಘೋಷಣೆಗಳ ಫಲಕಗಳನ್ನು ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ್ದು ವಿಶೇಷವಾಗಿತ್ತು.
ಜಾಥಾವು ಹಳೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ತೇರು ಬೀದಿ ಮೂಲಕ ಹೆಚ್.ಆರ್.ಗವಿಯಪ್ಪ ವೃತ್ತ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ತಲುಪಿ ಯಶಸ್ವಿಗೊಂಡಿತು.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)










ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ