ಮಂಗಳವಾರ, ಜೂನ್ 3, 2025

ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಬಳ್ಳಾರಿ,ಜೂ.03(ಕರ್ನಾಟಕ ವಾರ್ತೆ): ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 29 ರ ವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪರೀಕ್ಷೆಯು ಡಿಸೆಂಬರ್ 13 ರಂದು ನಡೆಯಲಿದ್ದು, ಆಸಕ್ತರು ಆನ್ ಲೈನ್ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ