ಬುಧವಾರ, ಜೂನ್ 11, 2025
ವ್ಯಕ್ತಿ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಜೂ.11(ಕರ್ನಾಟಕ ವಾರ್ತೆ):
ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರ್.ಕುಬೇರ ಎನ್ನುವ 32 ವರ್ಷದ ವ್ಯಕ್ತಿಯು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಚಹರೆ: ಅಂದಾಜು 5.5 ಅಡಿ ಎತ್ತರ, ದುಂಡು ಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಬಲಗೈಗೆ ಅಪ್ಪು ಎಂದು ಹಚ್ಚೆ ಹಾಕಿಸಿಕೊಂಡಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬುತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಪಿಎಸ್‌ಐ ಮೊ.94808203082, ಪಿಐ ಮೊ.9480803046 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ