ಗುರುವಾರ, ಜೂನ್ 19, 2025
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಶುಲ್ಕ ಮರುಪಾವತಿಗೆ ಅವಧಿ ವಿಸ್ತರಣೆ
ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ):
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕೋರ್ಸ್ಗಳಿಗೆ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜೂ.30 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.08392-275751, ಮೊ.8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭಾನುಮತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ