ಸೋಮವಾರ, ಜೂನ್ 23, 2025

ಮೃತ ಅನಾಮಧೇಯ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಜೂ.23(ಕರ್ನಾಟಕ ವಾರ್ತೆ): ನಗರದ ಬಸ್ ನಿಲ್ದಾಣದ ಕಾವ್ಯ ಕಂಫರ್ಟ್ಸ್ ಬಾರ್ ನ ಹತ್ತಿರ ಸುಮಾರು 70 ವರ್ಷದ ಅನಾಮಧೇಯ ವ್ಯಕ್ತಿಯು ಜೂ.21 ರಂದು ವಯೋ ಸಹಜ ಖಾಯಿಲೆಯಿಂದ ಕಂಡುಬAದಿದ್ದು, ಬಿ.ಎಂ.ಸಿ ಮತ್ತು ಆರ್.ಸಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ಕೌಲ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.6 ಅಡಿ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಎಣ್ಣೆಗೆಂಪು ಮೈ ಬಣ್ಣ, ಬೋಳು ತಲೆ ಇದ್ದು ಬಿಳಿ ಕರುಚಲು ಗಡ್ಡ ಇರುತ್ತದೆ. ಭೂಧಿ ಬಣ್ಣದ ತುಂಬುತೋಳಿನ ಅಂಗಿ ಮತ್ತು ವಿವಿಧ ಬಣ್ಣಗಳ ಚೌಕಳಿಯ ಲುಂಗಿ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಅಥವಾ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, ಪಿ.ಐ ಮೊ.9480803047, ಪಿಎಸ್‌ಐ ಮೊ.9480803084 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ