ಮಂಗಳವಾರ, ಜೂನ್ 17, 2025

ಕುಡತಿನಿ ಪಟ್ಟಣ ಪಂಚಾಯಿತಿ: ಅರ್ಜಿ ಆಹ್ವಾನ

ಬಳ್ಳಾರಿ,ಜು.17(ಕರ್ನಾಟಕ ವಾರ್ತೆ): ಕುಡತಿನಿ ಪಟ್ಟಣ ಪಂಚಾಯಿತಿ ವತಿಯಿಂದ 2025-26ನೇ ಸಾಲಿನ ಎಸ್‌ಎಫ್‌ಸಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಾಗೂ ಇತರೆ ಶೇ.7.25, ವಿಕಲಚೇತನರ ಸೌಲಭ್ಯ ಶೇ.5ರ ಯೋಜನೆಯಡಿ ವೈಯಕ್ತಿಕ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕುಡತಿನಿ ಪಟ್ಟಣ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಪಂಗಡ ವರ್ಗ ಮತ್ತು ಹಿಂದುಳಿದ ವರ್ಗದವರಿಗೆ ನಳ ಸಂಪರ್ಕ ಶುಲ್ಕ ವೆಚ್ಚ ಭರಿಸಲಾಗುವುದು ಮತ್ತು ಕುಡತಿನಿ ಪಟ್ಟಣ ವ್ಯಾಪ್ತಿಯಲ್ಲಿ ಬರುವ ವಿಶೇಷ ಚೇತನರಿಗೆ ಜೀವವಿಮೆ ಮಾಡಿಸಲಾಗುವುದು. ಅರ್ಜಿ ನಮೂನೆಗಳನ್ನು ಕುಡತಿನಿ ಪಟ್ಟಣ ಪಂಚಾಯಿತಿ ಕಾರ್ಯಾಲಯದಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಜುಲೈ 07 ರೊಳಗಾಗಿ ಪಟ್ಟಣ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕುಡತಿನಿ ಪಟ್ಟಣ ಪಂಚಾಯಿತಿ ಕಚೇರಿಗೆ ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ