ಮಂಗಳವಾರ, ಜೂನ್ 3, 2025

ಮೃತ ಅನಾಮಧೇಯ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಜೂ.03(ಕರ್ನಾಟಕ ವಾರ್ತೆ): ನಗರದ ಕೌಲ್ ಬಜಾರ್‌ನ ವಿನಾಯಕನಗರದ ಡಿಡಿಪಿ ಕಚೇರಿಯ ಹಿಂಭಾಗ ಸುಮಾರು 32 ವರ್ಷದ ಅನಾಮಧೇಯ ವ್ಯಕ್ತಿಯು ಮೇ 31 ರಂದು ಅಸ್ವಸ್ಥನಾಗಿ ಕಂಡುಬAದಿದ್ದು, ಟ್ರಾಮಾಕೇರ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ಬಳ್ಳಾರಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.5 ಅಡಿ, ದುಂಡು ಮುಖ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ 2-3 ಇಂಚು ಬಿಳಿ ಮಿಶ್ರಿತ ಕಪ್ಪು ಕೂದಲು, ಕುರುಚಲು ಗಡ್ಡ ಬಿಟ್ಟಿರುತ್ತಾನೆ. ತಿಳಿ ನೀಲಿ ಬಣ್ಣದ ಹಾಫ್ ಟೀ-ಶರ್ಟ್ ಮತ್ತು ಹಸಿರು ಪಟ್ಟಿಯ ಬೂದಿ ಬಣ್ಣದ ಅಂಡರ್ ವೇರ್ ಹಾಗೂ ಗ್ರೇ ಬಣ್ಣದ ಬರ್ಮೋಡ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಅಥವಾ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಪಿ.ಐ ಮೊ.9480803049 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ