ಸೋಮವಾರ, ಜೂನ್ 23, 2025
ಕರಾಮುವಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ: ನೋಂದಣಿಗೆ ಆಹ್ವಾನ
ಬಳ್ಳಾರಿ,ಜೂ.23(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದಾಗಿದೆ.
ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ರಾಷ್ಟçಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ(ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.
ಆಸಕ್ತರು ಜೂ.30 ರೊಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಬಳ್ಳಾರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಡಾ.ಹೆಚ್.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ