ಬುಧವಾರ, ಜೂನ್ 25, 2025
ಮಹಾನಗರ ಪಾಲಿಕೆ: ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ):
ಮಹಾನಗರ ಪಾಲಿಕೆ ವ್ಯಾಪ್ತಿಗೆ ನಿವೇಶನ ರಹಿತ ಮತ್ತು ವಸತಿ ರಹಿತರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ) 2.0 ಅಡಿಯಲ್ಲಿ ವಸತಿ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ವೆಬ್‌ಸೈಟ್ https://pmay-urban.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಜು.15 ಅರ್ಜಿ ಸಲ್ಲಿಸಲು ಕೊನೆಯ ದಿನ.
*ಬೇಕಾದ ದಾಖಲೆಗಳು:*
ಅರ್ಜಿದಾರರ ಆಧಾರ್ ಕಾರ್ಡ್ ಮತ್ತು ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ವಸತಿ ರಹಿತರಾಗಿದ್ದಲ್ಲಿ ನಿವೇಶನಕ್ಕೆ ಸಂಬAಧಿಸಿದ ದಾಖಲೆಗಳು(ಹಕ್ಕುಪತ್ರ, ಕ್ರಯಪತ್ರ, ದಾನಪತ್ರ, ಉಡುಗೊರೆ, ಖಾತಾ), ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆಯ ವಿವರ, ಆಧಾರ್ ಕಾರ್ಡ್ಗೆ ಲಿಂಕ್ ಇರುವ ಮೊಬೈಲ್ ಸಂಖ್ಯೆ, ಪಾನ್ ಕಾರ್ಡ್(ಲಭ್ಯವಿದ್ದಲ್ಲಿ), ನಿಗಧಿತ ನಮೂನೆ(ಅನೆಕ್ಷರ್-2ಎ,2ಬಿ,2ಸಿ) ಯಲ್ಲಿ ಸೆಲ್ಪ್ ಅಂಡರ್‌ಟೆಕಿAಗ್ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಸಾಮಾನ್ಯ ಸೇವಾ ಕೇಂದ್ರ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಗಡಗಿ ಚೆನ್ನಪ್ಪ ವೃತ್ತ (ರಾಯಲ್ ಸರ್ಕಲ್) ಹತ್ತಿರದ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿ ಅಥವಾ ದೂ.08392-273479/278168 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ