ಸೋಮವಾರ, ಜೂನ್ 30, 2025

ಮೃತ ಅನಾಮಧೇಯ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಜೂ.30(ಕರ್ನಾಟಕ ವಾರ್ತೆ): ನಗರದ ರಾಧಿಕಾ ಸಿನಿಮಾ ಮಂದಿರ ಹತ್ತಿರ ಸುಮಾರು 60 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೋ ಖಾಯಿಲೆಯಿಂದ ಅಸ್ವಸ್ಥವಾಗಿ ಮಲಗಿದ್ದು ಜೂ.24 ರಂದು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾನೆ. ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ಬ್ರೂಸ್‌ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.5 ಅಡಿ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಬಿಳಿ ಕೂದಲು ಮತ್ತು ಮುಖದಲ್ಲಿ ಬಿಳಿ ಗಡ್ಡ, ಮೀಸೆ ಹೊಂದಿರುತ್ತಾನೆ. ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, 258102 ಅಥವಾ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿ.ಐ ಮೊ.9480803045, ಪಿಎಸ್‌ಐ ಮೊ.9480803081 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ