ಶುಕ್ರವಾರ, ಜೂನ್ 27, 2025

ಮೀನು ಸಾಕಾಣಿಕೆಯಿಂದ ಆರ್ಥಿಕ ಅಭಿವೃದ್ಧಿ: ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್

ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ): ಮಹಿಳೆಯರು ಬಿಡುವಿನ ಸಮಯದಲ್ಲಿ ತಮ್ಮ ಕೃಷಿ ಚಟುವಟಿಕೆ ಜೊತೆಗೆ ಕೃಷಿ ಹೊಂಡದಲ್ಲಿ ಮೀನು ಸಾಕಾಣಿಕೆ ಮಾಡುವುದರಿಂದ ತಮ್ಮ ಕುಟುಂಬ ಆರ್ಥಿಕ ಅಭಿವೃದ್ಧಿಯಾಗುವುದು ಎಂದು ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಗಿರಿಜಾ ಶಂಕರ ಅವರು ಹೇಳಿದರು. ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸ್ವ ಸಹಾಯ ಸಂಘದ ಮಹಿಳೆಯರಿಗೆ 10 ದಿನಗಳ ಉಚಿತ ಮೀನು ಸಾಕಾಣಿಕೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಿನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರು ಮಾತನಾಡಿ, ಮೀನು ಆರೋಗ್ಯಕ್ಕೆ ಉತ್ತಮ ಆಹಾರವಾಗಿದ್ದು, ಪ್ರತಿಯೊಂದು ದೇಹದಲ್ಲಿರುವ ಕೊಲೆಸ್ಟಾçಲ್‌ನ್ನು ಸಮತೋಲನದಲ್ಲಿ ಇಡುತ್ತದೆ. ಇದನ್ನು ಔಷಧಿ ತಯಾರಿಕೆಯಲ್ಲಿ ಉಪಯೋಗಿಸುತ್ತಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ಭೀಮಪ್ಪ.ಕೆ ಲಾಳಿ, ವಿನೋದ ಕುಮಾರ.ಸಿ., ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೆಸಾಬ್.ಎಚ್ ಎರಿಮನಿ, ಜಿಲ್ಲಾ ಪಂಚಾಯತ್‌ನ ಎನ್‌ಆರ್‌ಎಲ್‌ಎಂ ಸಿಬ್ಬಂದಿಗಳಾದ ರಾಜೇಂದ್ರ, ವಿಜಯ ಕುಮಾರ, ರಘುವರ್ಮ, ಉಪನ್ಯಾಸಕರಾದ ದಿನೇಶ್, ಸಿದ್ದಲಿಂಗಮ್ಮ, ಸಂತೋಷ ಕುಮಾರ್ ಸೇರಿದಂತೆ ಮಹಿಳಾ ಶಿಭಿರಾರ್ಥಿಗಳು ಇನ್ನಿತರರು ಉಪಸ್ಥಿತರಿದ್ದರು. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ