ಶನಿವಾರ, ಜೂನ್ 21, 2025

ಕೈಗಾರಿಕಾ ನಿವೇಶನಗಳ ಹಂಚಿಕೆಗಾಗಿ ಬೇಡಿಕೆ: ಉದ್ದಿಮೆದಾರರಿಂದ ಅರ್ಜಿ ಆಹ್ವಾನ

ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ): ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಸಂಜೀವರಾಯನ ಕೋಟೆ ಗ್ರಾಮದಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸಲು (155 ಎಕರೆ) ಉದ್ದೇಶಿಸಿದ್ದು, ಈ ಕೈಗಾರಿಕಾ ಪ್ರದೇಶದಲ್ಲಿ ಜೀನ್ಸ್, ಜವಳಿ ಉತ್ಪನ್ನಗಳ ಕೈಗಾರಿಕೆಗಳನ್ನು ಸ್ಥಾಪಿಸಲು ಆಸಕ್ತಿಯುಳ್ಳ ಉದ್ದಿಮೆದಾರರಿಂದ ನಿವೇಶನ ಹಂಚಿಕೆಗಾಗಿ ಬೇಡಿಕೆಯ ಬಗ್ಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಉದ್ದಿಮೆದಾರರು, ತಮ್ಮ ಅರ್ಜಿಯನ್ನು ಜುಲೈ 11 ರೊಳಗಾಗಿ ಇ-ಮೇಲ್ ಮೂಲಕ ಅಥವಾ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಬಳ್ಳಾರಿ ಅಥವಾ ಉಪ ನಿರ್ದೇಶಕರು, ಜವಳಿ ಮತ್ತು ಕೈಮಗ್ಗ ಇಲಾಖೆ, ಬಳ್ಳಾರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಬಳ್ಳಾರಿ. ಈ ಕಚೇರಿಗಳ ವಿಳಾಸಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ ವಿಳಾಸ: doballari@kiadb.in, ddhtbellari@gmail.com, jddicbellary@gmail.com ಅಥವಾ ವೆಬ್ ಸೈಟ್ ವಿಳಾಸ: www,kiadb,in ಅಥವಾ ಮತ್ತು ಮೊ.7975234573, 9901313417, 9964768334 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ