ಬುಧವಾರ, ಜೂನ್ 18, 2025

ಸ್ವಯಂ ಸೇವಕರ ನೇಮಕ: ಅರ್ಜಿ ಆಹ್ವಾನ

ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಎನ್‌ವಿಬಿಡಿಸಿ ಕಾರ್ಯಕ್ರಮದಡಿ ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ನಗರ ಪ್ರದೇಶದಲ್ಲಿ ಡೆಂಗ್ಯೂ ಹರಡುವ ಈಡೀಸ್ ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶ ಕಾರ್ಯಕ್ಕೆ ಪ್ರತಿ ದಿನಕ್ಕೆ ರೂ.400 ಗೌರವಧನದÀಂತೆ ಕನಿಷ್ಠ 100 ದಿನಗಳಿಗೆ ಕಾರ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಕೊಳ್ಳಲಾಗುತ್ತಿದ್ದು, ಪಿಯುಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಅಧಿಕಾರಿಗಳ ಕಚೇರಿ ಅಥವಾ ದೂ.08392-294610 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಬಿಡಿಸಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ