ಬುಧವಾರ, ಜೂನ್ 4, 2025

ಕುರುಗೋಡು: ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜೂ.04(ಕರ್ನಾಟಕ ವಾರ್ತೆ): ಕುರುಗೋಡು ಪುರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಯೋಜನೆಯಡಿ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಸೌಲಭ್ಯದ ವಿವರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ನಿವೇಶನ ಹೊಂದಿದ್ದಲ್ಲಿ, ಪಕ್ಕಾ ಮನೆ ನಿರ್ಮಾಣ ಮಾಡಲು ಸಹಾಯಧನ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶಸ್ತç ಚಿಕಿತ್ಸೆಗಾಗಿ ಸಹಾಯಧನ. ಎಂಬಿಬಿಎಸ್ ಮತ್ತು ಬಿಇ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಖರೀದಿಗಾಗಿ ಸಹಾಯಧನ ನೀಡಲಾಗುತ್ತದೆ. ಬೇಕಾದ ದಾಖಲೆಗಳು: ಆಧಾರ್ ಕಾರ್ಡ್, ಒಂದು ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಖಾತೆಯ ಪ್ರತಿ ಸಲ್ಲಿಸಬೇಕು. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಪುರಸಭೆ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜೂನ್ 16 ರೊಳಗಾಗಿ ಸಲ್ಲಿಸಬೇಕು. ತಡವಾಗಿ ಬಂದ ಮತ್ತು ಅಪೂರ್ಣ ದಾಖಲಾತಿ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ