ಸೋಮವಾರ, ಜೂನ್ 30, 2025

ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಜೂ.30(ಕರ್ನಾಟಕ ವಾರ್ತೆ): ತಾಲ್ಲೂಕಿನ ಸಂಗನಕಲ್ಲು ಗ್ರಾಮದ 4ನೇ ವಾರ್ಡ್ನ ಭೋವಿ ಕಾಲೋನಿಯ ನಿವಾಸಿಯಾದ ವಿ.ಗೋವಿಂದರಾಜ ಎನ್ನುವ 30 ವರ್ಷದ ವ್ಯಕ್ತಿಯು ಜೂ.14 ರಂದು ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ. ಚಹರೆ: ಅಂದಾಜು 5.8 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಬಾಂಡ್ಲಿ ತಲೆಯ ಹಿಂದೆ ಕಪ್ಪು ಕೂದಲು ಮತ್ತು ಬಲಗಾಲು ಸ್ವಲ್ಪ ದಪ್ಪ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ತುಂಬುತೋಳಿನ ಅಂಗಿ ಮತ್ತು ಕಂದು ಬಣ್ಣದ ಪ್ಯಾಂಟ್ ಮತ್ತು ಟೋಪಿ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ