ಸೋಮವಾರ, ಜೂನ್ 23, 2025
ಸಣ್ಣ ನೀರಾವರಿ ಹಾಗೂ ನೀರಿನಾಸರೆಗಳ ಗಣತಿ ಕಾರ್ಯ ಅಚ್ಚುಕಟ್ಟಾಗಿರಲಿ | ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ
ಬಳ್ಳಾರಿ,ಜೂ.23(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿನ ಸಣ್ಣ ನೀರಾವರಿ ಹಾಗೂ ನೀರಿನಾಸರೆಗಳ ಗಣತಿ ಕಾರ್ಯವನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ 7ನೇ ಸಣ್ಣ ನೀರಾವರಿ ಮತ್ತು 2ನೇ ನೀರಿನಾಸರೆಗಳ ಗಣತಿ ಕಾರ್ಯದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಶೇ.100ರಷ್ಟು ಕೇಂದ್ರ ಸುರಕ್ಷಿತ ಸಣ್ಣ ನೀರಾವರಿ ಅಂಕಿ-ಅAಶಗಳ ಸಮನ್ವಯೀಕರಣ ಯೋಜನೆ ಅಡಿಯಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಸಣ್ಣ ನೀರಾವರಿ ಗಣತಿಯನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿರುವ ಎಲ್ಲಾ ಸಣ್ಣ ನೀರಾವರಿ ಹಾಗೂ ನೀರಿನಾಸರೆಗಳ ಗಣತಿಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಮಟ್ಟದಲ್ಲಿ ಗಣತಿ ಕಾರ್ಯ ಮಾಡುವ ಮೇಲ್ವಿಚಾಕರಿಗೆ ಮತ್ತು ತಾಲ್ಲೂಕು ಮಟ್ಟದಲ್ಲಿ ಗಣತಿ ಕಾರ್ಯ ಕೈಗೊಳ್ಳುವ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಗಣತಿ ಕಾರ್ಯ ವಿಧಾನದ ಕುರಿತು ಸೂಕ್ತ ತರಬೇತಿ ಹೊಂದಬೇಕು ಎಂದು ತಿಳಿಸಿದರು.
ಕಂದಾಯ ಇಲಾಖೆ, ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ಪುರಸಭೆ, ನಗರಸಭೆಗಳು ರಾಜ್ಯದ ಹಿತದೃಷ್ಟಿಯಿಂದ ಈ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಗಣತಿ ಕ್ಷೇತ್ರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಪತ್ರಿಬಸಪ್ಪ ಅವರು ಮಾತನಾಡಿ, ಪ್ರಸ್ತುತ 2023-24ನೇ ವರ್ಷವನ್ನಾಧರಿಸಿ 7ನೇ ಸಣ್ಣ ನೀರಾವರಿ ಹಾಗೂ 2ನೇ ನೀರಿನಾಸರೆಗಳ ಗಣತಿಯನ್ನು ಡಿಜಿಟಲ್ ಮೋಡ್ ನೊಂದಿಗೆ ಪ್ರಥಮ ಬಾರಿಗೆ ಮೊಬೈಲ್ ಆಪ್ ಬಳಸಿ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಗಣತಿ ಕಾರ್ಯಕ್ಕೆ ತಾಲ್ಲೂಕು ಮಟ್ಟದಲ್ಲಿ ಸಂಬAಧಪಟ್ಟ ಸಿಬ್ಬಂದಿಗೆ ತರಬೇತಿ ಏರ್ಪಡಿಸಲಾಗುವುದು ಎಂದರು.
ಅAತರ್ಜಲ ಯೋಜನೆಗಳು ಹಾಗೂ ಮೇಲ್ಮೆöÊ ಜಲ ಯೋಜನೆಗಳು ಎಂದು ವರ್ಗೀಕರಿಸಲಾಗಿದೆ. 40 ಹೆಕ್ಟೇರ್‌ವರೆಗಿನ ಅಚ್ಚುಕಟ್ಟು ಇರುವ ಯೋಜನೆಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧೀನದಲ್ಲಿರುತ್ತದೆ. 40 ಹೆಕ್ಟೇರ್‌ಗಳಿಗೆ ಮೇಲಿನ 2 ಸಾವಿರ ಹೆಕ್ಟೇರ್‌ವರೆಗಿನ ಅಚ್ಚುಕಟ್ಟು ಇರುವ ಯೋಜನೆಗಳು ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿರುತ್ತವೆ. 2ಸಾವಿರ ಹೆಕ್ಟೇರ್‌ಗಳಿಗೆ ಮೇಲಿನ ಅಚ್ಚುಕಟ್ಟು ಇರುವ ಯೋಜನೆಗಳು ಬೃಹತ್ ನೀರಾವರಿ ಇಲಾಖೆಯ ಅಧೀನದಲ್ಲಿರುತ್ತವೆ ಎಂದು ತಿಳಿಸಿದರು.
ಅಂತರ್ಜಲ ಯೋಜನೆಗಳನ್ನು 4 ವಿಧಗಳಾಗಿ ಅಗೆದ ಬಾವಿ, ಆಳವಲ್ಲದ ಕೊಳವೆ ಬಾವಿ, ಮಧ್ಯಮ ಆಳದ ಕೊಳವೆ ಬಾವಿ ಮತ್ತು ಆಳದ ಕೊಳವೆ ಬಾವಿಗಳಾಗಿ ವರ್ಗಿಕರಿಸಲಾಗಿದೆ ಹಾಗೂ ನೀರಿನಾಸರೆಯ ವಿಧಗಳು, ಹೊಂಡಗಳು, ಸರೋವರಗಳು ಕೆರೆಗಳ, ಜಲಾಶಯಗಳು, ಜಲಸಂರಕ್ಷಣಾ ಯೋಜನೆಗಳಾಗಿವೆ ಎಂದರು.
ಬಳಿಕ ಗಣತಿ ಕಾರ್ಯದ ಕುರಿತು ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಅಭಿಯಂತರಾದ ಆರ್.ವೆಂಕಟೇಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರಾದ ಇಂಧುದರ, ಕೃಷಿ ಇಲಾಖೆಯ ಉಪನಿರ್ದೇಶಕ ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ