ಶನಿವಾರ, ಜೂನ್ 21, 2025

ಕೆ-ಸೆಟ್, ಯುಜಿಸಿ-ನೆಟ್ ಪರೀಕ್ಷೆಗಳಿಗೆೆ ತರಬೇತಿ: ನೋಂದಣಿಗೆ ಆಹ್ವಾನ

ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕಪರೀಕ್ಷಾಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟçಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಜೆಆರ್‌ಪಿಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂ.30 ರೊಳಗಾಗಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವÀ ಪ್ರೊ.ನವೀನ್ ಕುಮಾರ್ ಎಸ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ