ಶನಿವಾರ, ಜೂನ್ 21, 2025

ಪ್ರತಿಯೊಬ್ಬರೂ ಉದ್ಯೋಗ ಸೃಷ್ಟಿಸುವಂತರಾಗಬೇಕು: ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ

ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ): ಪ್ರತಿಯೊಬ್ಬರೂ ಸ್ವ ಉದ್ಯೋಗ, ಸ್ವಾವಲಂಬನೆ ಮತ್ತು ಸ್ವ-ದುಡಿಮೆಗಾಗಿ ಉದ್ಯೋಗ ಸೃಷ್ಠಿಸುವಂತರಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು ಕರೆ ನೀಡಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಬಳ್ಳಾರಿ ಚೇಂಬರ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೌಶಲ್ಯಾಭಿವೃದ್ಧಿ ಇಲಾಖೆ, ಪ್ರಧಾನ ಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಯೋಜನೆಯಡಿ ತರಬೇತಿ ಪಡೆದಿರುವ ಟ್ಯಾಲಿ ಪ್ರೆöÊಮ್ ಮತ್ತು ಹೋಟಲ್ ಮೇನೇಜ್‌ಮೆಂಟ್ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಯುವಕರು ದೇಶದ ಭವಿಷ್ಯ. ಮುಕ್ತ ಮತ್ತು ತೆರೆದ ಮನಸ್ಸಿನಿಂದ ಹೊಸತನಕ್ಕೆ ದೊಡ್ಡ ದೊಡ್ಡ ಕನಸುಗಳನ್ನು ಕಾಣಬೇಕು. ದೊಡ್ಡ ದೊಡ್ಡ ಸಾಧನೆಗಳನ್ನು ಸಾಧಿಸಲು ಪ್ರತಿಯೊಬ್ಬರೂ ಪ್ರಯತ್ನಿಸಿ ಮುಂದಿನ ಪೀಳಿಗೆಗೆ ಆದರ್ಶ ಮಾರ್ಗದರ್ಶಕರು ಮತ್ತು ಪ್ರೇರಣೆ ನೀಡುವವರಂತಾಗಬೇಕು ಎಂದರು. ಈ ಹಿಂದೆ ಮಾಹಿತಿ ಕೊರತೆ ಸಾಕಷ್ಟಿತ್ತು. ಇಂಟರ್‌ನೆಟ್ ಮತ್ತು ಸ್ಮಾರ್ಟ್ ಮೊಬೈಲ್‌ಗಳು ಮಾಹಿತಿಯ ಕೊರತೆಯನ್ನು ನೀಗಿಸಿದ್ದು, ಮೆಟ್ರೋ ಸಿಟಿಯ ವಿದ್ಯಾರ್ಥಿಗಳಿಗೆ ಸಿಗುವ ಎಲ್ಲಾ ಮಾಹಿತಿ, ಜ್ಞಾನ ಹಳ್ಳಿಯ ವಿದ್ಯಾರ್ಥಿಗಳಿಗೂ ಸುಲಭವಾಗಿ ಸಿಗುತ್ತಿದೆ. ವಿದ್ಯಾರ್ಥಿಗಳು ತಮಗೆ ಬೇಕಾದ್ದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು ಅಧ್ಯಕ್ಷತೆ ವಹಿಸಿ, ಟ್ಯಾಲಿಪ್ರೆöÊಂ, ಬೇಸಿಕ್ ಕಂಪ್ಯೂರ‍್ಸ್ನಲ್ಲಿ 200 ಅಭ್ಯರ್ಥಿಗಳು, ಹೋಟಲ್ ಮ್ಯಾನೇಜ್ ಮೆಂಟ್‌ನಲಿ 50 ಅಭ್ಯರ್ಥಿಗಳು ತರಬೇತಿ ಪಡೆದಿದ್ದು, ಆಸಕ್ತರಿಗೆ ಅಪ್ರೆಂಟಿಶಿಫ್ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ.ಮರ್ಚೇಡ್ ಮಲ್ಲಿಕಾರ್ಜುನಗೌಡ ಮಾತನಾಡಿ, ಹೋಟಲ್ ಮ್ಯಾನೇಜ್ ಮೆಂಟ್ ಕೋರ್ಸ್ನ ತರಬೇತಿ ಪಡೆದಲ್ಲಿ `ನಿರುದ್ಯೋಗ’ ಸಮಸ್ಯೆಯೂ ಇರುವುದಿಲ್ಲ, ಈ ಕ್ಷೇತ್ರದಲ್ಲಿ ಅವಕಾಶಗಳಿಗೆ ಕೊನೆಯಿಲ್ಲ ಎಂದರು. ಟ್ಯಾಕ್ಸೇಷನ್ ಕಮಿಟಿ ಚೇರ್ಮನ್ ಸಿಎ ಕೆ.ರಾಜಶೇಖರ್ ಮಾತನಾಡಿ, ಭವಿಷ್ಯದಲ್ಲಿ ವೃತ್ತಿಪರ ಕೋರ್ಸ್ಗಳಿಗೆ ಬೇಡಿಕೆ ಇದೆ. ಹಾಗಾಗಿ ವಿದ್ಯಾರ್ಥಿಗಳು ಕೇವಲ ಕ್ಲಾಸ್‌ರೂಂಗೆ ಸೀಮಿತಗೊಳ್ಳದೇ ವೃತ್ತಿಪರ ಕೋರ್ಸ್ಗಳಿಗೆ ಸೇರಿ ಆಯಾ ವೃತ್ತಿಯ ಕೌಶಲ್ಯ, ನೈಪುಣ್ಯತೆಯನ್ನು ಪಡೆಯಲು ಪ್ರಯತ್ನಿಸಬೇಕು ಎಂದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು ವಂದನಾರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಅವ್ವಾರು ಮಂಜುನಾಥ, ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಜಂಟಿ ಕಾರ್ಯದರ್ಶಿ ವಿ. ರಾಮಚಂದ್ರ, ಚೇಂಬರ್ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ನ ನಾಗಳ್ಳಿ ರಮೇಶ್, ಕೆ.ನಾಗರಾಜ್ ಹಾಗೂ ಅಭ್ಯರ್ಥಿಗಳು ಉಪಸ್ಥಿತರಿದ್ದರು. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ