ಬುಧವಾರ, ಜೂನ್ 25, 2025

ಬೆಳೆ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಕ್ರಿಯೆ ಪ್ರಾರಂಭಗೊAಡಿದ್ದು, ರೈತರು ತಮ್ಮ ವಿವಿಧ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಸಹಾಕಯ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಬೆಳೆ ವಿಮೆಯಿಂದ ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾಯೋಜನೆಯಿಂದ ಅನುಕೂಲವಾಗಲಿದೆ. ಮಳೆಯಾಶ್ರಿತ ಬೆಳೆಗಳಾದ ರಾಗಿ, ನವಣೆ, ಹುರುಳಿ, ನೆಲಗಡಲೆ, ಸಜ್ಜೆ, ತೊಗರಿ ಭತ್ತ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು. ನೋಂದಣಿಗೆ ಆಗಸ್ಟ್ 16 ಕೊನೆಯ ದಿನ. ರೈತರು ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ರೈತರು ತಮ್ಮ ವ್ಯವಹಾರದ ಬ್ಯಾಂಕ್‌ಗಳಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ತಾಲೂಕು ಪ್ರತಿನಿಧಿಗೆ (ಮೊ.7996453241) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ