ಮಂಗಳವಾರ, ಜೂನ್ 3, 2025

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ: ಅರ್ಜಿ ಆಹ್ವಾನ

ಬಳ್ಳಾರಿ,ಜೂ.03(ಕರ್ನಾಟಕ ವಾರ್ತೆ): ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿAಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.15 ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಮೊಬೈಲ್ ಸಂಖ್ಯೆ 8050370006 (ಸಮಯ ಬೆಳಿಗ್ಗೆ 10 ರಿಂದ ಸಚಿಜೆ 5.30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ) ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ