ಶುಕ್ರವಾರ, ಜೂನ್ 20, 2025

ಅಂತರಾಷ್ಟಿçÃಯ ಯೋಗ ದಿನಾಚರಣೆ; ಜನಜಾಗೃತಿಗಾಗಿ ಬೈಕ್ ಜಾಥ | ಯೋಗದಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ವೃದ್ಧಿ: ಡಾ.ವಿರುಪಾಕ್ಷ

ಬಳ್ಳಾರಿ,ಜೂ.20(ಕರ್ನಾಟಕ ವಾರ್ತೆ): ಪ್ರತಿನಿತ್ಯ ಯೋಗ ಮಾಡುವುದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ವೃದ್ಧಿಸುತ್ತದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 11ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಜನಜಾಗೃತಿ ಮೂಡಿಸಲು ನಗರದ ಕನಕದುರ್ಗಮ್ಮ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬೈಕ್ ಜಾಥಾ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಒಳ್ಳೆಯ ಜೀವನಶೈಲಿ ಅತ್ಯಗತ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಬಿಡುವಿನ ಸಮಯದಲ್ಲಿ ಯೋಗಾಭ್ಯಾಸ ಮಾಡಬೇಕು. ಈ ವರ್ಷದ ಘೋಷವಾಕ್ಯವು ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬುದಾಗಿದೆ ಎಂದು ತಿಳಿಸಿದರು. ಜಾಥಾವು ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭಗೊAಡು ಎಸ್‌ಪಿ ವೃತ್ತ-ಹೆಚ್.ಆರ್.ಗವಿಯಪ್ಪ ವೃತ್ತ – ಗಡಿಗಿ ಚೆನ್ನಪ್ಪ ವೃತ್ತದಿಂದ ಮರಳಿ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಅಂತ್ಯಗೊAಡಿತು. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಯೋಗ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ