ಶನಿವಾರ, ಜೂನ್ 21, 2025

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಅಂತಾರಾಷ್ಟಿçÃಯ ಯೋಗ ದಿನಾಚರಣೆ

ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ): ಭಾರತೀಯ ಸಂಸ್ಕೃತಿಯ ಯೋಗ ಪ್ರಪಂಚಕ್ಕೆ ವಿಶಿಷ್ಟ ಕೊಡುಗೆಯಾಗಿದೆ ಎಂದು ಆರ್ಟ್ ಆಫ್ ಲಿವಿಂಗ್‌ನ ಯೋಗ ಶಿಕ್ಷಕರು ಹಾಗೂ ಜೆ.ಎಸ್.ಡಬ್ಲೂö್ಯ ರಿಫ್ರಾಕ್ಟರೀಸ್‌ನ ಉಪಾಧ್ಯಕ್ಷರಾದ ಗಣಪತಿ ಪ್ರಸಾದ್.ಎಂ ಅವರು ಹೇಳಿದರು. 11ನೇ ಅಂತಾರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ವಿವಿ ಬಯಲು ರಂಗಮAದಿರದಲ್ಲಿ ಶನಿವಾರ ಆಯೋಜಿಸಿದ್ದ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯವಾದ ಕಾರ್ಯಕ್ರಮವನ್ನು ಪತಂಜಲಿ ಮಹರ್ಶಿರವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು. ಯೋಗ ಕೇವಲ ವ್ಯಾಯಾಮವಲ್ಲ, ಆರೋಗ್ಯ, ಮಾನಸಿಕ ಮತ್ತು ಶಾರೀರಿಕವಾಗಿ ಲಾಭದಾಯಕವಾಗಿದೆ. ದೇಹದ ಸಾಮರಸ್ಯ, ಆಲೋಚನೆ, ದೇಹದಲ್ಲಿ ನಡೆಯುವ ಕ್ರಿಯೆಗಳ ನಡುವಿನ ಸಮತೋಲನ, ಸಂಯಮ ಹಾಗೂ ಏಕಾಗ್ರತೆಯನ್ನು ಪ್ರೇರಿಪಿಸುತ್ತದೆ. ಯೋಗದಿಂದಾಗಿ ಒತ್ತಡದ ಜೀವನವನ್ನು ನಿರ್ವಹಿಸಲು ಸಹಕಾರಿಯಾಗಿದೆ ಎಂದು ಹೇಳಿದರು. ವಿಶ್ವವಿದ್ಯಾಲಯದ ಕುಲಸಚಿವರಾದ ಎಸ್.ಎನ್.ರುದ್ರೇಶ್ ಮಾತನಾಡಿ, ಒತ್ತಡದ ಜೀವನ ನಿರ್ವಹಿಸಲು ಜನರು ಪಟ್ಟಣಗಳಿಂದ ಹಳ್ಳಿಗಳತ್ತ ಮುಖಮಾಡಿದ್ದಾರೆ. ಅದರಲ್ಲಿ ಯೋಗವನ್ನು ಅನುಸರಿಸುತ್ತಿದ್ದಾರೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ ಎಂದರು. ವಿವಿಯ ಯೋಗ ಅಧ್ಯಯನ ಉಪನ್ಯಾಸಕರಾದ ಮಹೇಶ ಬಾಬು, ವಿದ್ಯಾರ್ಥಿಗಳಿಂದ ಸಾಮಾನ್ಯ ಯೋಗ ಶಿಷ್ಟಾಚಾರ ಹಾಗೂ ಸಾಮೂಹಿಕ ಯೋಗ ಪ್ರದರ್ಶನ ಮಾಡಲಾಯಿತು. ಮಹೇಶ್ ಹಾಗೂ ಚಂದ್ರಿಕ ಯೋಗ ವಿದ್ಯಾರ್ಥಿಗಳಿಂದ ಯೋಗ ನೃತ್ಯ ಮಾಡಲಾಯಿತು. ನೋಟ್‌ಬುಕ್ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕೃತರಾದ ಡಾ. ಕೆ. ಶಿವಲಿಂಗಪ್ಪ ಹಂದಿಹಾಳು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಕಲ್‌ಪೇಟೆ ಕಥಾಸಂಕಲನಕಾರ ವಿರೇಂದ್ರ ರುವಿಹಾಳ, ಶುದ್ಧ ವಿಜ್ಞಾನ ನಿಕಾಯದ ಡೀನರಾದ ಡಾ. ಶಶಿಕಾಂತ ಮಜಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂತರಾಷ್ಟಿçÃಯ ಯೋಗ ದಿನಾಚಾರಣೆಯ ಸಂಯೋಜಕರಾದ ಡಾ. ಶಶಿಧರ ಕೆಲ್ಲೂರ ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ಸಂಶೋಧನಾ ವಿದ್ಯಾರ್ಥಿ ರಮೇಶ್ ನಿರೂಪಿಸಿದರು. ರಾಜೇಶ್ ಸಿ ವಂದಿಸಿದರು. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿದರು. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ