ಶನಿವಾರ, ಜೂನ್ 21, 2025

ಬಳ್ಳಾರಿ: ಜಿಲ್ಲಾ ನ್ಯಾಯಾಲಯದಲ್ಲಿ ಅಂತರಾಷ್ಟಿçÃಯ ಯೋಗ ದಿನಾಚರಣೆ | ಯೋಗ ಮಾಡುವುದು ಪ್ರತಿಯೊಬ್ಬರಿಗೂ ಅವಶ್ಯಕ: ನ್ಯಾಯಾಧೀಶರಾದ ಕೆ.ಜಿ.ಶಾಂತಿ

ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ): ಪ್ರಸ್ತುತ ದಿನಗಳಲ್ಲಿ ಯೋಗವು ಪ್ರತಿಯೊಬ್ಬರಿಗೂ ಅತ್ಯಾವಶ್ಯಕವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ‘ಒಂದು ಭೂಮಿ, ಒಂದೇ ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇಂದಿನ ಬದುಕಿನ ಜಂಜಾಟದಲ್ಲಿ ಎಲ್ಲರಿಗೂ ಒತ್ತಡ ಸಾಮಾನ್ಯವಾಗಿದೆ. ಯೋಗ ಎಂದರೆ ದೇಹ ಮತ್ತು ಮನಸ್ಸಿನ ಸಂಗಮವಾಗಿದ್ದು, ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಯೋಗ ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ. ಹಾಗಾಗಿ ಪ್ರತಿಯೊಬ್ಬರೂ ದಿನದಲ್ಲಿ ಕನಿಷ್ಠ ಒಂದು ಗಂಟೆ ಯೋಗಭ್ಯಾಸ ಮಾಡುವುದರಿಂದ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬಹುದು ಎಂದರು. ಕಾರ್ಪೋರೆಟರ್ ವಲಯದಲ್ಲಿ ಉದ್ಯೋಗಿಗಳು ಕೆಲಸಕ್ಕೆ ಹೋಗುವ ಮುನ್ನ ಅವರಿಗೆ ಯೋಗ ಮಾಡಿಸಲಾಗುತ್ತದೆ. ಇದರಿಂದ ಒತ್ತಡ ಮುಕ್ತರಾಗಿ ಕಾರ್ಯನಿರ್ವಹಿಸಲು ಸಹಾಯಕವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ 10 ನಿಮಿಷಗಳ ಕಾಲ ಧ್ಯಾನ ಮಾಡಬೇಕು ಎಂದು ತಿಳಿಸಿದರು. ವಿದೇಶಿಯನ್ನರು ನಮ್ಮ ದೇಶಕ್ಕೆ ಬಂದು ಇಲ್ಲಿನ ಯೋಗಾಭ್ಯಾಸವನ್ನು ಕಲಿತು ಅಲ್ಲಿ ಪ್ರಾರಂಭಿಸುತ್ತಿದ್ದಾರೆ. ಯೋಗದ ಆಯಾಮಗಳಿಂದಾಗುವ ಪರಿಣಾಮವನ್ನರಿತು ಸದೃಢ ಆರೋಗ್ಯವನ್ನು ಹೊಂದುತ್ತಿದ್ದಾರೆ. ನಾವು ಸಹ ನಮ್ಮ ಜೀವನದಲ್ಲಿ ಯೋಗಾಭ್ಯಾಸ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಚಿಂತೆ ಮಾಡುವವರು ಅನಾರೋಗ್ಯ ಕಟ್ಟಿಟ್ಟ ಬುತ್ತಿ. ಹಾಗಾಗಿ ಚಿಂತೆಗೆ ಒಳಪಡದೇ ಆರೋಗ್ಯಕರ ಜೀವನ ಹೊಂದಬೇಕು. ಯೋಗ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ದಿನನಿತ್ಯದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ ಅವರು ಯೋಗಾಭ್ಯಾಸ ನಡೆಸಿಕೊಟ್ಟರು. ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಮೋದ.ಬಿ.ಜಿ., ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಘವೇಂದ್ರ ಗೌಡ.ಬಿ.ಜಿ., 3ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಡಿ.ಪಿ ಕುಮಾರಸ್ವಾಮಿ, 4ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಾಸುದೇವ ರಾಧಕಾಂತ್ ಗುಡಿ, ಜಿಲ್ಲಾ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ವೆಂಕಟೇಶ್, ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರು ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಇಬ್ರಾಹಿಂ ಮುಜಾವರ್, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಅಪರ್ಣ, ಎರಡನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ನಸ್ರತ್ ಮುಖ್ತಾರ್ ಅಹ್ಮದ್ ಖಾನ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಪ್ರಿನ್ಸಿಪಲ್ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ನಾಗೇಶ್ ನಾಯ್ಕ, 1ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಿದ್ಧಲಿಂಗಯ್ಯ ಗಂಗಾಧರಮಠ, 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ವಿನುತಾ.ಬಿ.ಎಸ್., 3ನೇ ಅಪರ ಸಿವಿಲ್ ನ್ಯಾಯಾಧೀಶರಾದ ಮುದುಕಪ್ಪ ಒಡನ್, ಅರಣ್ಯ ಇಲಾಖೆಯ ಅಧಿಕಾರಿ ದಾಸನಗೌಡ ಬಿ.ಪಾಟೀಲ್ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಯೋಗಾಭ್ಯಾಸದಲ್ಲಿ ಭಾಗವಹಿಸಿದ್ದರು. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ