ಗುರುವಾರ, ಜುಲೈ 31, 2025
ಆ.01 ರಂದು ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಜು.31(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 01 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣ ಹೊಂಗಿರಣದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸತ್ಯಂ ಶಿಕ್ಷಕರ ಶಿಕ್ಷಣ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಬಾಷ ಅವರು ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿ ಹಿಂದೂಸ್ತಾನಿ ಗಾಯಕ ನಾಗಭೂಷಣ ಬಾಪುರೆ ಅವರಿಂದÀ ವಚನ ಸಂಗೀತ ಪ್ರಸ್ತುತಪಡಿಸುವರು. ಬಳ್ಳಾರಿಯ ಅಮಾತಿ ಬಸವರಾಜ್ ಕಾರ್ಯಕ್ರಮ ನಿರೂಪಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂ ರಾವ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
------------
ಪೂರ್ವಭಾವಿ ಸಭೆಯಲ್ಲಿ ಎಸಿ ಪ್ರಮೋದ್ ಹೇಳಿಕೆ | ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಬಳ್ಳಾರಿ,ಜು.31(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಕಾಯಕಯೋಗಿ ನುಲಿಯ ಚಂದಯ್ಯ, ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಹೇಳಿದರು.
ಮಹನೀಯರ ಜಯಂತಿ ಆಚರಣೆ ಕುರಿತಂತೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಆ.09 ರಂದು ಕಾಯಕಯೋಗಿ ನುಲಿಯ ಚಂದಯ್ಯ ಮತ್ತು ಆ.16 ರಂದು ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಚರಿಸಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆ.09 ರಂದು ಕಾಯಕಯೋಗಿ ನುಲಿಯ ಚಂದಯ್ಯ ಕಾರ್ಯಕ್ರಮವನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಯೋಜಿಸಲಾಗುವುದು. ಇದಕ್ಕೂ ಮುನ್ನ ಜಯಂತಿಯ ಮೆರವಣಿಗೆಯು ಕೌಲ್ ಬಜಾರ್ ನ ಕೊರವರ ಬೀದಿಯ ಸಮುದಾಯ ಭವನದ ಆವರಣದಿಂದ ವೇದಿಕೆ ಕಾರ್ಯಕ್ರಮದವರೆಗೂ ನಡೆಯಲಿದೆ. ಪಾಲಿಕೆ ವತಿಯಿಂದ ಟ್ರಾö್ಯಕ್ಟರ್, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದರು.
ಆ.16 ರಂದು ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ನಗರದ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಪುಟ್ ಬಾಲ್ ಮೈದಾನದ ಸಭಾಂಗಣದಲ್ಲಿ ಆಯೋಜಿಸಲಾಗುವುದು. ಬೇಕಾದ ಎಲ್ಲಾ ಸಿದ್ಧತೆ ಕೈಗೊಳ್ಳಬೇಕು. ಜಯಂತಿಯ ಮೆರವಣಿಗೆಯು ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭವಾಗಿ ವೇದಿಕೆ ಕಾರ್ಯಕೆಮದವರೆಗೆ ನಡೆಯಲಿದ್ದು, ಮೆರವಣಿಗೆಗೆ ಸಂಚಾರಕ್ಕೆ ತೊಂದರೆಯುAಟಾಗದAತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ಮೆರವಣಿಗೆಯಲ್ಲಿ ಎರಡು ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ವೇದಿಕೆ ಕಾರ್ಯಕ್ರಮದಲ್ಲಿ ಮಹನೀಯರ ಚರಿತ್ರೆಯನ್ನು ತಿಳಿಯಪಡಿಸಲು ನುರಿತರಿಂದ ವಿಶೇಷ ಉಪನ್ಯಾಸ, ವಚನ ಗಾಯನ ಸಂಗೀತ ಆಯೋಜಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ ಸದಸ್ಯ ಗಾದೆಪ್ಪ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.
------------
ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ
ಬಳ್ಳಾರಿ,ಜು.31(ಕರ್ನಾಟಕ ವಾರ್ತೆ):
2025-26ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯವರೆಗೆ ಕರ್ನಾಟಕದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಇವರಿಂದ ಪಡೆಯಬಹುದು.
ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ವರೆಗೆ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಅಕ್ಟೋಬರ್ 31 ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ನವೆಂಬರ್ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
---------------
ಆ.01 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜು.31(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ 110/11ಕೆ.ವಿ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಆ.01 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯವರೆಗೆ ಎಫ್-6 ವ್ಯಾಪ್ತಿಯ ನಗರದ ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
-------------
ಬುಧವಾರ, ಜುಲೈ 30, 2025
ರೈತರು ಬೆಳೆಗಳ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರಗಳನ್ನು ಬಳಸಿ-ಯೂರಿಯಾ ಗೊಬ್ಬರಕ್ಕೆ ಆತಂಕ ಬೇಡ
ಬಳ್ಳಾರಿ,ಜು.30(ಕರ್ನಾಟಕ ವಾರ್ತೆ):
ಜಿಲ್ಲೆಯ ರೈತರು ತಾವು ಬೆಳೆಯುವ ಬೆಳಗಳ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರಗಳನ್ನು ಬಳಸಬೇಕು. ಯೂರಿಯಾ ರಸಗೊಬ್ಬರಕ್ಕೆ ಆತಂಕಪಡುವ ಅಗತ್ಯವಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಜುಲೈ ಮಾಹೆಯವರೆಗೆ ಒಟ್ಟು 27025 ಮೆ.ಟನ್‌ಗಳ ಬೇಡಿಕೆ ಇದ್ದು, ಇಲ್ಲಿಯವರೆಗೆ ಪ್ರಾರಂಭಿಕ ಶಿಲ್ಕು ಸೇರಿ 34,163 ಮೆ.ಟನ್ ದಾಸ್ತಾನು ಮಾಡಲು, ಈ ಪೈಕಿ 25,887 ಮೆ.ಟನ್ ವಿತರಣೆಯಾಗಿ 8,286 ಮೆ.ಟನ್‌ಗಳಷ್ಟು ದಾಸ್ತಾನು ಉಳಿದಿದೆ.
ಜಿಲ್ಲೆಯಲ್ಲಿ ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಬಿತ್ತನೆ ಮಾಡಲು ಲಭ್ಯವಿದ್ದ ಒಟ್ಟು 2,81,522 ಹೆಕ್ಟೇರ್ ಸಾಗುವಳಿ ಪ್ರದೇಶಕ್ಕೆ ಅನುಗುಣವಾಗಿ ಯೂರಿಯಾ ರಸಗೊಬ್ಬರಗಳ ಬೇಡಿಕೆ ಅಂದಾಜಿಸಲಾಗಿ ಮಾಹೆವಾರು ಕಾರ್ಯಕ್ರಮವನ್ನು ಸರಬರಾಜುದಾರರುವಾರು ರೂಪಿಸಿಕೊಳ್ಳಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಮಳೆಯು ಉತ್ತಮವಾಗಿ ಬಂದ ಕಾರಣ ಹೆಚ್ಚಿನ ಪ್ರದೇಶದಲ್ಲಿ ಬೆಳೆಗಳನ್ನು ಬಿತ್ತನೆ ಮಾಡಲು ರೈತರು ಉತ್ಸುಕತೆ ತೋರಿದ ಪರಿಣಾಮವಾಗಿ ಎರಡು, ಮೂರು ವರ್ಷಗಳಿಂದ ಮೆಣಸಿನಕಾಯಿ ಬೆಳೆಯ ಬೆಲೆಯಲ್ಲಿ ಕುಸಿತವಾದ ಪರಿಣಾಮ ಜಿಲ್ಲೆಯಲ್ಲಿ ಮೆಕ್ಕೆಜೋಳ ಮತ್ತು ಹತ್ತಿ ಬೆಳೆಯ ಬಿತ್ತನೆ ಪ್ರದೇಶ ಕ್ರಮವಾಗಿ 24,000 ಹೆಕ್ಟೇರ್‌ನಿಂದ 30,000 ಹೆಕ್ಟೇರ್‌ಗೆ ಹಾಗೂ 20,000 ಹೆಕ್ಟೇರ್‌ನಿಂದ 25,000 ಹೆಕ್ಷೇರ್‌ಗೆ ಏರಿಕೆಯಾಗಿದೆ.
ಮುಖ್ಯವಾಗಿ ತುಂಗಭದ್ರ ನದಿಯ ನೀರನ್ನು ಕಾಲುವೆಗಳಿಗೆ ಮುಂಚಿತವಾಗಿ ಹರಿಸಿರುವುದರಿಂದ ಸಂಯುಕ್ತ ಗೊಬ್ಬರಗಳಿಗೆ ಹೋಲಿಕೆ ಮಾಡಿದಲ್ಲಿ ಯೂರಿಯಾ ರಸಗೊಬ್ಬರದ ಬೆಲೆ ಕಡಿಮೆಯಿರುವುದರಿಂದ ಸಮತೋಲನವಾಗಿ ರಸಗೊಬ್ಬರಗಳನ್ನು ಬಳಸದೇ ಕೇವಲ ಯೂರಿಯಾ ರಸಗೊಬ್ಬರವನ್ನು ಹೆಚ್ಚಾಗಿ ಬಳಸುತ್ತಿರುವುದು ಕಂಡುಬAದಿದೆ ಮತ್ತು ವಿಜ್ಞಾನಿಗಳು ಹಾಗೂ ಇಲಾಖೆಯಿಂದ ಶಿಫಾರಸ್ಸು ಮಾಡಲಾದ ಪ್ರಮಾಣಕ್ಕಿಂತ ರೈತರು ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡುತ್ತಿರುವುದು ಹಾಗೂ ಕೆಲವು ರೈತರು ಬೆಳೆಯ ವಿವಿಧ ಹಂತಗಳಲ್ಲಿ ಬಳಕೆಗೆ ಬೇಕಾದ ರಸಗೊಬ್ಬರಗಳನ್ನು ಮುಂಗಡವಾಗಿ ಖರೀದಿಸಿ ದಾಸ್ತಾನು ಮಾಡಿಕೊಂಡಿದ್ದಾರೆ.
ಈ ಮೇಲಿನ ಕಾರಣಗಳಿಂದಾಗಿ ಮಾಹೆವಾರು ಯೂರಿಯಾ ರಸಗೊಬ್ಬರದ ಬೇಡಿಕೆ, ಸರಬರಾಜು, ವಿತರಣೆ ಮತ್ತು ದಾಸ್ತಾನು ಇಲಾಖೆಯು ರೂಪಿಸಿದ ಯೋಜನೆಯನುಸಾರ ಇದ್ದಾಗ್ಯೂ ಸಹ ಜಿಲ್ಲೆಯ ರೈತರಿಂದ ಯೂರಿಯಾ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಪದೇ ಪದೇ ಬರುತ್ತಿರುವುದನ್ನು ಕೃಷಿ ಇಲಾಖೆಯು ಗಂಭೀರವಾಗಿ ಪರಿಗಣಿಸಿ ಮುಂಗಾರು ಪೂರ್ವ ಮತ್ತು ಪ್ರಸಕ್ತ ಮುಂಗಾರಿನಲ್ಲಿ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಜಿಲ್ಲೆಯ ಸಗಟು ಮತ್ತು ಚಿಲ್ಲರೆ ರಸಗೊಬ್ಬರ ಪರಿವೀಕ್ಷಕರು ಅನಿರೀಕ್ಷಿತ ಭೇಟಿ ನೀಡಿ ರಸಗೊಬ್ಬರದ ದಾಸ್ತಾನಿನ ಜೊತೆಗೆ ರಸಗೊಬ್ಬರ ನಿಯಂತ್ರಣ ಆದೇಶ 1985ರಡಿಯ ಎಲ್ಲಾ ಅಂಶಗಳನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಅಭಿಯಾನ ರೂಪದಲ್ಲಿ ಜಿಲ್ಲೆಯ 450ಕ್ಕೂ ಹೆಚ್ಚು ಮಳಿಗೆಗಳನ್ನು ಸಮಗ್ರವಾಗಿ ತಪಾಸಣೆ ಕೈಗೊಂಡು ಗುಣ ನಿಯಂತ್ರಣದಡಿ ಸುಮಾರು 200ಕ್ಕೂ ಮೇಲ್ಪಟ್ಟು ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಿ ರಸಗೊಬ್ಬರಗಳ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳಲು ಹಾಗೂ ದಾಸ್ತಾನು ಮತ್ತು ವಿತರಣೆಯಲ್ಲಿ ರಸಗೊಬ್ಬರ ವಿತರಕರು ಪಾಲಿಸಬೇಕಾದ ಅಗತ್ಯ ಕ್ರಮಗಳ ಕುರಿತು ಪರವಾನಿಗೆ ಹೊಂದಿರುವುದು, ಬಿಲ್ಲುಗಳನ್ನು ಕಡ್ಡಾಯವಾಗಿ ನೀಡುವ ಬಗ್ಗೆ, ಹೆಚ್ಚಿನ ದರಕ್ಕೆ ಮಾರಾಟ ಮಾಡದಿರುವ ಬಗ್ಗೆ ಹೋಬಳಿ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ವಿವಿಧ ಸಭೆಗಳಲ್ಲಿ ಅಗತ್ಯ ಎಚ್ಚರಿಕೆ ಮತ್ತು ಸೂಚನೆಗಳನ್ನು ಸಹ ನೀಡಲಾಗಿದೆ.
ಜೊತೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನಗಳನ್ವಯ ಯೂರಿಯಾ ಗೊಬ್ಬರದ ಅವೈಜ್ಞಾನಿಕ ಬಳಕೆಯ ದುಷ್ಪರಿಣಾಮಗಳು ಮತ್ತು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ನ್ಯಾನೋ ರಸಗೊಬ್ಬರಗಳನ್ನು (ವಿಶೇಷವಾಗಿ ನ್ಯಾನೋ ಯೂರಿಯಾ ಮತ್ತು ಡಿ.ಎ.ಪಿ) ಪರ್ಯಾಯವಾಗಿ ಬಳಸುವ ಕುರಿತು ಅರಿವು ಮೂಡಿಸಲಾಗುತ್ತಿದೆ.
ಬೆಳೆಗಳ ಪದ್ಧತಿಯಲ್ಲಿ ಆದ ಹೆಚ್ಚಿನ ಬದಲಾವಣೆ, ಯೂರಿಯಾ ರಸಗೊಬ್ಬರದ ಕಡಿಮೆ ಬೆಲೆ ಮತ್ತು ಸಂಯುಕ್ತ ಗೊಬ್ಬರಗಳ ಹೆಚ್ಚಿನ ಬೆಲೆ ಮುಂಚಿತವಾಗಿ ಆಗಮಿಸಿದ ಮುಂಗಾರು ಹಾಗೂ ತುಂಗಭದ್ರ ನದಿ ನೀರು ಮತ್ತು ರೈತರ ಅವೈಜ್ಞಾನಿಕವಾಗಿ ಬಳಸುತ್ತಿರುವ ಪ್ರಮಾಣದ ಕಾರಣ ಜಿಲ್ಲೆಯಲ್ಲಿನ ಯೂರಿಯಾ ಗೊಬ್ಬರದ ಬೇಡಿಕೆ ಹೆಚ್ಚುತ್ತಿರುತ್ತದೆ. ಜಿಲ್ಲೆಯಲ್ಲಿ ಹೆಚ್ಚಿನ ಕೊರತೆ ಇಲ್ಲದಿದ್ದರೂ ಮಾಹೆವಾರು ರೂಪಿಸಿರುವ ರಸಗೊಬ್ಬರಗಳ ಕಾರ್ಯಕ್ರಮದ ಅನುಸಾರ ಸರಬರಾಜು, ವಿತರಣೆ ಮತ್ತು ದಾಸ್ತಾನನ್ನು ಸರಿದೂಗಿಸಿ ರೈತರಿಗೆ ಅವಶ್ಯವಿರುವ ಯೂರಿಯಾ ಗೊಬ್ಬರದ ಜೊತೆಗೆ ಇತರೆ ಅವಶ್ಯಕತೆ ಗೊಬ್ಬರಗಳನ್ನು ಒದಗಿಸಲು ಇಲಾಖೆಯು ನಿರಂತರ ಕ್ರಮವಹಿಸಲಾಗಿದೆ.
ಮುಂದಿನ ದಿನಗಳಲ್ಲಿ ಉದ್ಭವಿಸಬಹುದಾದ ಬೇಡಿಕೆಯನ್ನು ಸಹ ಈಗಾಗಲೇ ಮಾಹೆ ಹಾಗು ಸರಬರಾಜುದಾರರವಾರು ರೂಪಿಸಿಕೊಂಡಿರುವ ಗುರಿಗಳನ್ವಯ ದಾಸ್ತಾನು ಮಾಡಿ ಸೂಕ್ತ ರೀತಿಯಲ್ಲಿ ವಿತರಿಸಲಾಗುತ್ತದೆ ಹಾಗೂ ಈ ಸಮಯದಲ್ಲಿ ಯಾವುದೇ ಕೃಷಿ ಪರಿಕರ ಮಾರಾಟಗಾರರು ಸಂಬAಧಿಸಿದ ಕಾನೂನುಗಳನ್ನು ಉಲ್ಲಂಘಿಸಿದ್ದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
ರೈತರಿಗೆ ರಸಗೊಬ್ಬರಗಳನ್ನು ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಅಥವಾ ಕೃತಕ ಅಭಾವ ಸೃಷ್ಠಿಸುವ ಪ್ರಸಂಗಗಳು ಕಂಡುಬAದಲ್ಲಿ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಅರ್ಜಿ ಆಹ್ವಾನ
ಬಳ್ಳಾರಿ,ಜು.30(ಕರ್ನಾಟಕ ವಾರ್ತೆ):
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆನ್‌ಲೈನ್ ವೆಬ್‌ಸೈಟ್ https://ssp.postmatric.karnataka.gov.in/ ಗೆ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------------
ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರಿಕೆ ವಹಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ,ಜು.30(ಕರ್ನಾಟಕ ವಾರ್ತೆ):
ತುಂಗಭದ್ರಾ ನದಿಗೆ ಹೆಚ್ಚುವರಿ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಪ್ರವಾಹದ ನೀರು ಬ್ಯಾಕ್ಟೀರಿಯಾ, ವೈರಸ್ ಮತ್ತು ಇತರೆ ರೋಗಾಣುಗಳಿಂದ ಕಲುಷಿತಗೊಂಡಿರಬಹುದಾಗಿದ್ದು, ಸಾರ್ವಜನಿಕರು ಎಚ್ಚರವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದರು.
ಬುಧವಾರ ಕಂಪ್ಲಿ ಪಟ್ಟಣದ ಕೋಟೆ ಪ್ರದೇಶಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಾ, ನೀರಿನ ಹರಿಯುವ ಮಟ್ಟ ಹೆಚ್ಚಾಗಿ ಹಾವು ಚೇಳು ಇತರೆ ವಿಷ ಜಂತುಗಳು ಜನವಾಸ ಪ್ರದೇಶಕ್ಕೆ ಬರುವ ಸಂಭವವಿದೆ. ನೀರಿನ ಹರಿವಿನಿಂದ ಅಪಾಯ ಸಂಭವಿಸುವ ಸಂದರ್ಭದಲ್ಲಿ ಸುರಕ್ಷಿತೆಗಾಗಿ ಎತ್ತರದ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಬೇಕು ಎಂದು ತಿಳಿಸಿದರು.
ಹಾವು ನಂಜು ನಿರೋಧಕ ಲಸಿಕೆ, ಓ.ಆರ್.ಎಸ್ ದ್ರಾವಣ, ನೆಗಡಿ ಕೆಮ್ಮು ಜ್ವರದ ಮಾತ್ರೆ, ಐ.ವಿ.ಫ್ಲೂಡ್, ಹ್ಯಾಲೋಜನ್ ಮಾತ್ರೆ, ಬ್ಲೀಚಿಂಗ್ ಪೌಡರ್ ಇತರೆ ಚಿಕಿತ್ಸಾ ಸೇವಾ ಸೌಲಭ್ಯಗಳು ಸಾಕಷ್ಟು ಪ್ರಮಾಣದಲ್ಲಿ ಮುಂಚೂಣಿಯಾಗಿ ಸಂಗ್ರಹಿಸಿ ಎಚ್ಚರಿಕೆ ವಹಿಸಲಾಗಿದೆ ಎಂದರು.
ಸಮುದಾಯದಲ್ಲಿ ಗೃಹ ಆರೋಗ್ಯ ಕಾರ್ಯಕ್ರಮ, ಗರ್ಭಿಣಿ, ಗಂಡಾAತರ ಗರ್ಭಿಣಿಯರ ಕಾಳಜಿ, ಸುಸೂತ್ರ ಹೆರಿಗೆ ಸೌಲಭ್ಯ, ತಾಯಿ ಮಗುವಿನ ಆರೈಕೆ ಕುರಿತಂತೆ ಆರೋಗ್ಯ ಪರ ಕ್ರಮಗಳನ್ನು ಅನುಸರಿಸಬೇಕು. ಅಪಾಯಕಾರಿ ಪ್ರದೇಶಗಳಲ್ಲಿನ ಜನಾರೋಗ್ಯ ಸಮೀಕ್ಷೆ ಪ್ರತಿದಿನ ನಡೆಸಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಿಬ್ಬಂದಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ದಿಶಾ ಸಮಿತಿಯ ಸದಸ್ಯ ಎ.ಸಿ.ದಾನಪ್ಪ, ಆರೋಗ್ಯ ಮೇಲ್ವಿಚಾರಕ ಟಿ.ವಿರೂಪಾಕ್ಷಪ್ಪ, ತಾಲ್ಲೂಕ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಜರಿದ್ದರು.
-------------
ವಿಶ್ರೀಕೃ ವಿಶ್ವವಿದ್ಯಾಲಯದ 16ನೇ ಸಂಸ್ಥಾಪನಾ ದಿನಾಚರಣೆ | ಶೈಕ್ಷಣಿಕ ಕ್ರಾಂತಿಯಲ್ಲಿ ವಿಶ್ವವಿದ್ಯಾನಿಲಯಗಳ ಪಾತ್ರ ಪ್ರಮುಖವಾಗಿದೆ: ಪ್ರೊ.ತೇಜಸ್ವಿ ವಿ.ಕಟ್ಟಿಮನಿ
ಬಳ್ಳಾರಿ,ಜು.30(ಕರ್ನಾಟಕ ವಾರ್ತೆ):
ಶೈಕ್ಷಣಿಕ ಕ್ರಾಂತಿಯಲ್ಲಿ ವಿಶ್ವವಿದ್ಯಾನಿಲಯಗಳ ಪಾತ್ರ ಪ್ರಮುಖವಾಗಿದ್ದು, ಪತ್ರಿಯೊಬ್ಬರು ಉನ್ನತ ಶಿಕ್ಷಣ ಪಡೆಯುವುದರ ಮೂಲಕ ತಮ್ಮ ಜೀವನದಲ್ಲಿ ಯಶಸ್ಸು ಕಾಣಬೇಕು ಎಂದು ಆಂಧ್ರಪ್ರದೇಶದ ಕೇಂದ್ರೀಯ ಗಿರಿಜನ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ.ತೇಜಸ್ವಿ ವಿ.ಕಟ್ಟಿಮನಿ ಅವರು ಹೇಳಿದರು.
ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಬಯಲು ರಂಗಮAದಿರ ಮುಖ್ಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ 16ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಜೀವನದಲ್ಲಿ ಶಿಕ್ಷಣ ವ್ಯವಸ್ಥೆ ಅತೀ ಮುಖ್ಯವಾದ ಭಾಗ. ಕಾಲಕ್ಕೆ ತಕ್ಕಂತೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಆಗುತ್ತಿರುವ ಬದಲಾವಣೆಗಳು ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು, ಇಡೀ ವಿಶ್ವದ ಗಮನ ಸೆಳೆಯುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ನಮ್ಮ ರಾಷ್ಟçದಲ್ಲಿ ಅಂತಾರಾಷ್ಟಿçÃಯ ವಿದ್ಯಾರ್ಥಿಗಳು ಬಂದು ಉನ್ನತ ಶಿಕ್ಷಣ ಪಡೆದುಕೊಳ್ಳುತ್ತಿದ್ದಾರೆ ಎಂದರೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿನ ಸಾಕಷ್ಟು ಬದಲಾವಣೆಗಳು ಹೊಸ-ಹೊಸ ಆವಿಷ್ಕಾರಗಳು ಕೂಡ ಇದಕ್ಕೆ ಕಾರಣವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಒಂದು ವಿಶ್ವವಿದ್ಯಾಲಯ ಉನ್ನತ ಸ್ಥಾನಕ್ಕೆ ಬರಲು ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯವಾಗುತ್ತದೆ. ಶಿಕ್ಷಕರಿಗೆ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮತ್ತು ಬದಲಾಯಿಸುವ ಶಕ್ತಿ ಇದೆ. ಇಂದಿನ ಯುವ ಪೀಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿಯಬೇಕಿದೆ. ಕೇವಲ ಅಂಕಗಳಿಗಾಗಿ ಮಾತ್ರ ಶಿಕ್ಷಣ ಸೀಮಿತವಾಗಿರದೇ ನಿಮ್ಮದೇ ಆದ ಕೌಶಲ್ಯಗಳನ್ನು ಬೆಳೆಸಿಕೊಂಡು ಮುಂದೆ ಬರಬೇಕು. ಜಗತ್ತಿನಲ್ಲಿ ಹಲವಾರು ಭಾಷೆಗಳಿವೆ. ಹೆಚ್ಚಿನ ಭಾಷೆ ಮತ್ತು ಕೌಶಲ್ಯಗಳನ್ನು ಕಲಿತುಕೊಂಡು ನಿಮ್ಮ ಜೀವನವನ್ನು ಉನ್ನತವಾಗಿ ರೂಪಿಸಿಕೊಂಡು ಗುರಿ ತಲುಪಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಧಾರವಾಡದ ಕರ್ನಾಟಕ ನೀರಾವರಿ ನಿಗಮ ನಿಯಮಿತ ಮುಖ್ಯ ಆಡಳಿತಾಧಿಕಾರಿ ಎಸ್.ಎನ್.ರುದ್ರೇಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಈ ಹಿಂದೆ ನಾನು ವಿಶ್ವವಿದ್ಯಾಲಯದಲ್ಲಿ ಕುಲಸಚಿವನಾಗಿದ್ದು, ನನ್ನ ಆಡಳಿತ ಅವಧಿಯಲ್ಲಿ ಇಲ್ಲಿನ ವಿದ್ಯಾರ್ಥಿಗಳು ಬಹಳ ಶಿಸ್ತಿನಿಂದ ನಡೆದುಕೊಳ್ಳುತ್ತಿದ್ದರು. 18 ವರ್ಷದ ನನ್ನ ಕೆಲಸದ ಸೇವೆಯಲ್ಲಿ ಯಾವ ಕೆಲಸವು ಇಂತಹ ಸಂತೋಷ ನೀಡಿರಲಿಲ್ಲ, ಇಂದಿಗೂ ಸಹ ವಿವಿಯಲ್ಲಿ ಮಾಡಿದ ಕೆಲಸದ ದಿನಗಳನ್ನು ನೆನಪಿಸಿಕೊಳ್ಳುತ್ತೇನೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದರು.
ಶಿಕ್ಷಣದ ಅಭಿವೃದ್ಧಿಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಅದನ್ನು ಮುಂದಿನ ದಿನಗಳಲ್ಲಿ ಹೇಗೆ ಮುನ್ನಡೆಸಬೇಕು ಎಂಬುದು ಸವಾಲಾಗಿದೆ. ಹಾಗಾಗಿ ವಿವಿಯು ಉನ್ನತ ಸ್ಥಾನಕ್ಕೆ ಬರಲು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಮನ್ವಯತೆ ಹೊಂದಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಜ್ಞಾನವು ವಿಶಾಲವಾದದ್ದು, ಆಳವಾದ ಅಧ್ಯಯನ ಮಾಡಿದಾಗ ಅದರ ಮಹತ್ವ ತಿಳಿಯುತ್ತದೆ. ವಿದ್ಯಾರ್ಥಿಗಳು ನಿಮ್ಮಲ್ಲಿರುವ ಕಲೆ ಮತ್ತು ಕೌಶಲ್ಯವನ್ನು ಉಪಯೋಗಿಸಿ ನಿಮ್ಮ ಗುರಿ ತಲುಪಬೇಕು ಎಂದು ಆಶಿಸಿದರು.
ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಕಷ್ಟು ವಿಶ್ವವಿದ್ಯಾನಿಲಯಗಳ ಜೊತೆ ಪೈಪೋಟಿ ನೀಡಬೇಕಾದರೆ ಗುಣಮಟ್ಟದ ಶಿಕ್ಷಣ ಅವಶ್ಯಕ ಮತ್ತು ವಿದ್ಯಾರ್ಥಿಗಳ ಔಚಿತ್ಯಪೂರ್ಣ ಶಿಕ್ಷಣ ನೀಡುವ ಜವಾಬ್ದಾರಿ ವಿಶ್ವವಿದ್ಯಾನಿಲಯದ್ದಾಗಿರುತ್ತದೆ. ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮ ಶಿಕ್ಷಣ ಮುಂದುವರಿಸಿಕೊAಡು ವಿದ್ಯಾರ್ಥಿಗಳ ಅರ್ಹತೆಗೆ ಅನುಗುಣವಾಗಿ ಶಿಕ್ಷಣ ನೀಡುವುದು ವಿಶ್ವವಿದ್ಯಾನಿಲಯಗಳ ಜವಾಬ್ದಾರಿಗಳಾಗಿವೆ. ಹೊಸ ರೀತಿಯ ಆವಿಷ್ಕಾರಗಳಿಗೆ ಅವಕಾಶಗಳನ್ನು ಕಲ್ಪಿಸಿಕೊಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ತಾವು ಸಾಗುವ ದಾರಿಯನ್ನು ಸ್ಮರಿಸಿಕೊಳ್ಳುತ್ತಾ ಸುಸ್ಥಿರ ಸಮಾಜ ಕಟ್ಟುವಲ್ಲಿ ಭಾಗಿಯಾಗಿ ಎಂದು ಸಲಹೆ ನೀಡಿದರು.
ನಮ್ಮ ವಿಶ್ವವಿದ್ಯಾಲಯವು ಸ್ಥಾಪನೆಗೊಂಡು 16ನೇ ವರ್ಷಕ್ಕೆ ಕಾಲಿಟ್ಟಿರುವುದು ಸಂತಸದ ವಿಷಯವಾಗಿದ್ದು, ವಿಜಯನಗರ ಸಾಮ್ರಾಜ್ಯದ ಶ್ರೀ ಕೃಷ್ಣದೇವರಾಯರ ಸ್ಮರಣೀಯವಾಗಿ ಈ ವಿವಿ ಯನ್ನು ಸ್ಥಾಪಿಸಲಾಯಿತು. ಮುಂದಿನ ದಿನಗಳಲ್ಲಿ ಈ ವಿಶ್ವವಿದ್ಯಾಲಯವು ಅತ್ಯುತ್ತಮ ಸ್ಥಾನ ಪಡೆಯುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ವಿಶ್ವವಿದ್ಯಾಲಯವು ಉನ್ನತ ಶಿಕ್ಷಣದ ಜೊತೆಗೆ ಉತ್ತಮ ಶಿಕ್ಷಕರು ಹಾಗೂ ಬೋಧಕರನ್ನು ಹೊಂದಿದೆ. ಪ್ರಸ್ತುತ ವಿವಿಯಲ್ಲಿ 29 ವಿಭಾಗಗಳಿದ್ದು, ಮುಂದಿನ ದಿನಗಳಲ್ಲಿ 45 ವಿಭಾಗಗಳನ್ನು ಮಾಡುವ ಗುರಿ ಹಾಗೂ ಕೌಶಲ್ಯಧಾರಿತ ಪಠ್ಯಕ್ರಮವನ್ನು ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮುನ್ನ ವಿವಿಧ ಸಾಂಸ್ಕೃತಿಕ ಕಲಾ ತಂಡಗಳಿAದ ನೃತ್ಯ ಮತ್ತು ಕಲೆ ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ವಿಶ್ರೀಕೃ ವಿಶ್ವವಿದ್ಯಾಲಯದ ಕುಲಸಚಿವ ನಾಗರಾಜು.ಸಿ., ಕುಲಸಚಿವ(ಮೌಲ್ಯಮಾಪನ) ಪ್ರೊ.ಎನ್.ಎಂ.ಸಾಲಿ, ಹಣಕಾಸು ಅಧಿಕಾರಿ ನಾಗರಾಜ, ಕಾರ್ಯಕ್ರಮ ಸಂಯೋಜಕ ಪ್ರೊ.ಎನ್.ಶಾಂತನಾಯ್ಕ್ ಸೇರಿದಂತೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ ಸದಸ್ಯರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
--------------
ಬಳ್ಳಾರಿ ನಗರದಲ್ಲಿ ಕಾಣಿಸಿಕೊಂಡಿದ್ದ ಕರಡಿಯ ರಕ್ಷಣೆ
ಬಳ್ಳಾರಿ,ಜು.30(ಕರ್ನಾಟಕ ವಾರ್ತೆ):
ನಗರದ ಟಿ.ಬಿ.ಸ್ಯಾನಿಟೋರಿಯಂ ಬಳಿ ಕಳೆದ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಕರಡಿಯನ್ನು ಬುಧವಾರ ಮುಂಜಾನೆ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ನಿರಂತರ ಕಾರ್ಯಾಚರಣೆಯಿಂದ ಯಶಸ್ವಿಯಾಗಿ ಸೆರೆ ಹಿಡಿದು ರಕ್ಷಿಸಲಾಗಿದೆ ಎಂದು ಬಳ್ಳಾರಿ ಪ್ರಾದೇಶಿಕ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್ ಅವರು ತಿಳಿಸಿದ್ದಾರೆ.
ಜು.28 ಸೋಮವಾರ ರಾತ್ರಿ 11 ಗಂಟೆಗೆ ಟಿ.ಬಿ.ಸ್ಯಾನಿಟೋರಿಯಂ ಬಳಿ ಕರಡಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಕರಡಿಯ ಚಲನ ವಲನಗಳ ಮೇಲೆ ನಿಗಾವಹಿಸಿ ಯಾವುದೇ ಅವಘಡಗಳು ಸಂಭವಿಸದAತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹಲವು ತಂಡಗಳನ್ನು ರಚಿಸಿ ಸೆರೆಹಿಡಿಯಲು ಯೋಜನೆ ರೂಪಿಸಲಾಗಿತ್ತು.
ಕರಡಿಯು ಬಳ್ಳಾರಿ ಕೋಟೆಯ ಮೇಲೆ ತೆರಳಿ ಬಂಡೆ ಪ್ರದೇಶದಲ್ಲಿ ಅಡಗಿಕೊಂಡಿತ್ತು. ಜನರನ್ನು ಗಾಬರಿಗೊಳಿಸದೇ ಪರ್ಯಾಯ ತಂಡಗಳನ್ನು ಕೋಟೆಯ ಸುತ್ತಮುತ್ತ ನಿಯೋಜಿಸಿ ಕೋಟೆಯ ಮೇಲೆ ಜನ ಸಂಚಾರವನ್ನು ನಿರ್ಭಂಧಿಸಲಾಗಿತ್ತು. ಕರಡಿ ನಿಧಾನವಾಗಿ ಕೋಟೆಯಿಂದ ಕೆಳಕ್ಕೆ ಇಳಿಯಲು ಪ್ರಾರಂಭಿಸಿದಾಗ ಕಮಲಾಪುರದ ಶ್ರೀಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯದ ಪಶು ವೈದ್ಯಕೀಯ ತಂಡದ ಸಹಾಯ ಪಡೆದು ಜು.30 ಬುಧವಾರ ಬೆಳಿಗ್ಗೆ 03 ಗಂಟೆ ಸಮಯದಲ್ಲಿ ಯಶಸ್ವಿಯಾಗಿ ಸೆರೆ ಹಿಡಿಯಲಾಯಿತು.
ಸೆರೆ ಹಿಡಿದಿರುವ ಕರಡಿಯು ಅಂದಾಜು ಐದು ವರ್ಷದ ಹೆಣ್ಣು ಕರಡಿಯಾಗಿದ್ದು, ಪಶು ವೈದ್ಯರ ತಂಡವು ಪ್ರಾಥಮಿಕವಾಗಿ ಪರೀಕ್ಷಿಸಿ ಕರಡಿಯ ಗುರುತಿಗಾಗಿ ಮೈಕ್ರೋ ಚಿಪ್ ಅಳವಡಿಸುವಿಕೆ, ಹೆಚ್ಚಿನ ಚಿಕಿತ್ಸೆ ಮತ್ತು ಪರೀಕ್ಷೆಗಾಗಿ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಕಳುಹಿಸಲಾಗಿದೆ.
ವಲಯ ಅರಣ್ಯಾಧಿಕಾರಿ ಗಿರೀಶ್ ಕುಮಾರ್ ಡಿ.ಕೆ ಮತ್ತು ಅವರ ಸಿಬ್ಬಂದಿಗಳ ತಂಡದ ನಿರಂತರ ಪ್ರಯತ್ನಗಳಿಂದ ಪೊಲೀಸ್ ಹಾಗೂ ಪುರಾತತ್ವ ಇಲಾಖೆಯ ಸಹಕಾರದೊಂದಿಗೆ ಸಾರ್ವಜನಿಕರಿಗೆ ಯಾವುದೇ ಅಪಾಯವಾಗದಂತೆ ಎರಡು ದಿನಗಳ ಕಾಲ ನಿರಂತರ ಕಾರ್ಯಾಚರಣೆಯ ನಂತರ ಕರಡಿಯನ್ನು ಸುರಕ್ಷಿತವಾಗಿ ಸೆರೆ ಹಿಡಿದು ರಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
-----------
ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಬೇಕು: ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ,ಜು.30(ಕರ್ನಾಟಕ ವಾರ್ತೆ):
ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ಅದನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ” ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಗಂಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಸಹಭಾಗೀದಾರರ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಕಾವಲು ಸಮಿತಿಯ ಸದಸ್ಯರಿಗೆ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಾನವನನ್ನು ಕೊಂಡುಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ. ಕಡಿಮೆ ವರ್ಷದ ಮಕ್ಕಳನ್ನು ದುಡ್ಡಿನ ಆಮೀಷ ಒಡ್ಡಿ ಮಾರಾಟ ಮಾಡಲಾಗುತ್ತಿದ್ದು, ಇದು ಕಾನೂನು ಪ್ರಕಾರ ತಪ್ಪು. ಸಮಾಜದಲ್ಲಿ ಇದೀಗ ಮಾನವ ಕಳ್ಳ ಸಾಗಾಣಿಕೆಯು ಬಹುದೊಡ್ಡ ಸಮಸ್ಯೆಯಾಗಿ ಬೆಳೆದಿದ್ದು, ಅದರಲ್ಲೂ ಮಾನವ ಕಳ್ಳ ಸಾಗಾಣಿಕೆಗೆ ಹೆಚ್ಚಾಗಿ ಬಲಿಯಾಗುತ್ತಿರುವವರು ಮಹಿಳೆಯರು ಮತ್ತು ಮಕ್ಕಳು. ಇದರಿಂದ ಎಲ್ಲರೂ ಎಚ್ಚೆತ್ತುಕೊಳ್ಳಬೇಕು ಎಂದರು.
ಬಡತನ, ನಿರುದ್ಯೋಗ, ತಂದೆ-ತಾಯಿಗಳಿಗೆ ವಿದ್ಯಾಭ್ಯಾಸದ ಕೊರತೆ ಇವೆಲ್ಲವೂ ಮಾನವ ಕಳ್ಳ ಸಾಗಾಣಿಕೆಗೆ ದಾರಿಯಾಗುತ್ತದೆ. ಮಹಿಳೆಯರು ಆಮಿಷಗಳಿಗೆ ಬಲಿಯಾಗಿ ಮೋಸ ಹೋಗುವುದನ್ನು ತಡೆಯಬೇಕು. ಮಕ್ಕಳನ್ನು ತುಂಬಾ ಜಾಗೃತೆಯಿಂದ ಬೆಳೆಸಲು ಹೆಚ್ಚು ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು.
ಅAಗನವಾಡಿ ಕೇಂದ್ರ ಮತ್ತು ಶಾಲೆಗಳಲ್ಲಿ ಮಕ್ಕಳು ಗೈರಾಗಿದ್ದಲ್ಲಿ ಹಾಜರಾತಿ ನೀಡಬಾರದು. ಮನೆ ಭೇಟಿ ನೀಡಬೇಕು. ವಾಸ್ತವ ಪರಿಶೀಲಿಸಬೇಕು. ಇದರಿಂದ ಆ ಮಗು ನಾಪತ್ತೆ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಲ್ಲಿ ತೊಡಗಿಕೊಂಡಿದೆ ಎಂಬುದು ಪತ್ತೆಯಾಗುತ್ತದೆ. ಮಗು ಗೈರಾಗಿದ್ದು, ಹಾಜರಾತಿ ನೀಡಿದಲ್ಲಿ ಆ ದಿನ ಆ ಮಗು ಕಾಣೆಯಾಗಿದ್ದಲ್ಲಿ ಅಥವಾ ಬಾಲ್ಯವಿವಾಹದಂತಹ ಘಟನೆ ಸಂಭವಿಸಿದಲ್ಲಿ ನೀವೇ ಜವಾಬ್ದಾರರಾಗುತ್ತೀರಿ ಎಂದು ಅಂಗನವಾಡಿ ಕಾರ್ಯಕರ್ತೆಯರಿಗೆ ಎಚ್ಚರಿಸಿದರು.
ಮಕ್ಕಳಿಗೆ ಕಾನೂನಿನಾತ್ಮಕ ಸೌಲಭ್ಯಗಳನ್ನು ದೊರಕಿಸಿಕೊಟ್ಟಾಗಾ ಮಗುವು ಬಲಿಷ್ಠವಾಗಿ ಬೆಳೆಯುತ್ತದೆ ಹಾಗೂ ದೇಶವು ಸುಭೀಷ್ಠ ರಾಷ್ಟçವಾಗಿ ಬೆಳೆಯಲಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದಲ್ಲಿನ ಅಪ್ರಾಪ್ತ ಮಕ್ಕಳು, ಮಹಿಳೆಯರು ಸೇರಿದಂತೆ ವ್ಯಕ್ತಿಗಳನ್ನು ಕಳ್ಳ ಸಾಗಾಣಿಕೆ ಮಾಡಿ ಲೈಂಗಿಕ ಶೋಷಣೆ, ಭಿಕ್ಷಾಟನೆ, ಜೀತ, ಬಾಲ ಕಾರ್ಮಿಕರ ಕೆಲಸ, ಅಂಗಾAಗ ಕಸಿ, ಬಾಲ್ಯ ವಿವಾಹ ಮತ್ತು ವೇಶ್ಯೆವಾಟಿಕೆ ಚಟುವಟಿಕೆಗಳಲ್ಲಿ ಬಳಸಿಕೊಳ್ಳಲಾಗುತ್ತಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಕಾನೂನು ಮತ್ತು ಶಿಕ್ಷೆ ಬಗ್ಗೆ ಜಾಗೃತಿ ಮೂಡಿಸಿ ಸಂಪೂರ್ಣವಾಗಿ ನಿರ್ಮೂಲನೆಯಾಗಿಸಲು ಅಧಿಕಾರಿಗಳು ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.
ಪ್ರತಿಯೊಬ್ಬರೂ ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಎಚ್ಚರವಹಿಸಬೇಕು. ನಿಮ್ಮ ಆಸಕ್ತಿಗಳನ್ನು ಬೇರೋಬ್ಬರೂ ಕದ್ದಾಲಿಸುವುದನ್ನು ಸಹ ನಾವು ಗಮನಿಸಬೇಕಿದೆ. ಇದರಿಂದ ಜಾಗರೂಕರಾಗಬೇಕಿದೆ ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ ಅವರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ದಂಧೆಯು ಸಮಾಜದ ಕಪ್ಪು ಚುಕ್ಕೆಯಾಗಿ ಪರಿಣಮಿಸಿದ್ದು, ಮಾನವ ಕಳ್ಳ ಸಾಗಾಣಿಕೆಯು ವಿದ್ಯಾವಂತರಿAದಲೇ ನಡೆಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ವಕೀಲರಾದ ತ್ರಿವೇಣಿ ಪತ್ತಾರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ “ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ” ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಾಗಾರ ಆರಂಭಕ್ಕೂ ಮುನ್ನ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸವಿತ.ಸಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹನುಮಂತಪ್ಪ, ಬಳ್ಳಾರಿ (ನಗರ) ಹಾಗೂ (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೋಹನ್ ಕುಮಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಗೂ ಇನ್ನೀತರರು ಉಪಸ್ಥಿತರಿದ್ದರು.
--------------
ತೋಟಗಾರಿಕೆ ಇಲಾಖೆ: ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ನೋಂದಣಿಗೆ ಆಹ್ವಾನ
ಬಳ್ಳಾರಿ,ಜು.30(ಕರ್ನಾಟಕ ವಾರ್ತೆ):
ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ರೈತರು ನೋಂದಾಯಿಸಿಕೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಪ್ರಕೃತಿ ವಿಕೋಪಗಳು/ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘÀಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರ ನೀಡುವುದರ ಮೂಲಕ ರೈತರಿಗೆ ನೆರವಾಗುತ್ತದೆ.
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲು ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು ಮತ್ತು ಸಿರುಗುಪ್ಪ ತಾಲ್ಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ಹಸಿಮೆಣಸಿನಕಾಯಿ ಮತ್ತು ದಾಳಿಂಬೆ ಬೆಳೆಯನ್ನು ಅಧಿಸೂಚಿಸಲಾಗಿದೆ.
ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಆಗಸ್ಟ್ 11 ಕೊನೆಯ ದಿನ. ವಿಮಾ ಕಂಪನಿ-ಎಸ್‌ಬಿಐ ಇನ್ಸುರೆನ್ಸ್.
*ಹಸಿಮೆಣಸಿನಕಾಯಿ:* ವಿಮಾ ಮೊತ್ತ-ರೂ.71,000(ಪ್ರತಿ ಹೆಕ್ಟೇರ್‌ಗೆ), ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ(ಪ್ರತಿ ಹೆಕ್ಟೇರ್‌ಗೆ)-ರೂ.3,550.
*ದಾಳಿಂಬೆ:* ವಿಮಾ ಮೊತ್ತ-ರೂ.1,27,000(ಪ್ರತಿ ಹೆಕ್ಟೇರ್‌ಗೆ), ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ(ಪ್ರತಿ ಹೆಕ್ಟೇರ್‌ಗೆ)- ರೂ.6,350 ಪಾವತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ-ದೂ.08392-278177. ಮೊ.9448511649. ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ-ದೂ.08395-260389, ಮೊ.9740934208. ಸಿರುಗುಪ್ಪ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ-ದೂ.08396-222066, ಮೊ.9448910277 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಆ.01 ರಂದು “ಜಾನಪದ ಸಂಗೀತ” ಕಲಿಕಾ ತರಬೇತಿ ಕಾರ್ಯಕ್ರಮ
ಬಳ್ಳಾರಿ,ಜು.30(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿನಿಯರಿಗೆ ಆ.01 ರಂದು ಸಂಜೆ 05 ಗಂಟೆಗೆ ನಗರದ ಕೋಟೆಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ “ಜಾನಪದ ಸಂಗೀತ” ಕಲಿಕಾ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಲಬುರಗಿ ವಲಯದ ಕಲಬುರಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದಪ್ಪ ಅವರು ಅಧ್ಯಕ್ಷತೆ ವಹಿಸುವರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ವರಿ.ಬಿ ಮುಖ್ಯ ಅತಿಥಿಗಳಾಗಿ ತರಬೇತಿದಾರರಾಗಿ ಜಾನಪದ ಗಾಯಕ ಎಸ್.ಎಂ. ಹುಲುಗಪ್ಪ ಸೇರಿದಂತೆ ಇತರರು ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
-------------
ಮಂಗಳವಾರ, ಜುಲೈ 29, 2025
ತುಂಗಭದ್ರ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುಗಡೆ | ನದಿಪಾತ್ರದ ಜನರು ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ
ಬಳ್ಳಾರಿ,ಜು.29(ಕರ್ನಾಟಕ ವಾರ್ತೆ):
ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದ್ದು, ಕಂಪ್ಲಿ ಗಂಗಾವತಿ ಮೇಲ್ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಮುಂಜಾಗ್ರತೆಗಾಗಿ ವಾಹನಗಳ ಸಂಚಾರ ಸ್ಥಗಿತ ಮತ್ತು ನದಿ ಭಾಗದಲ್ಲಿ ತೊಂದರೆಯಾಗದAತೆ ತುರ್ತು ಪರಿಸ್ಥಿತಿಗೆ ಬೋಟ್‌ಗಳ ವ್ಯವಸ್ಥೆಯನ್ನು ಮಾಡಲು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಂಗಳವಾರ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಳವಾಗಿದ್ದು, ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯಗಳ ನೀರಿನ ಮಟ್ಟ, ಒಳ ಹರಿವು, ಹೊರ ಹರಿವು ಹೆಚ್ಚಾಗಿದ್ದು ಜಲಾಶಯದಲ್ಲಿ 105.788 ಟಿ.ಎಂ.ಸಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, ಈಗಾಗಲೇ 80.001 ಟಿ.ಎಂ.ಸಿ ಭರ್ತಿಯಾಗಿದೆ. ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದ್ದು, ಕಂಪ್ಲಿ ಗಂಗಾವತಿ ಮೇಲ್ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ವಾಹನ ಸಂಚಾರವನ್ನು ಸ್ಥಗಿತ ಮಾಡಲಾಗಿದೆ. ಕಂಪ್ಲಿ ತಾಲ್ಲೂಕಿನ ತಹಶೀಲ್ದಾರರು, ಆರ್‌ಐ ಅಧಿಕಾರಿಗಳು ದೈನಂದಿನ ನೀರಿನ ಮಟ್ಟವನ್ನು ತಿಳಿದು ನದಿ ಪಾತ್ರದಲ್ಲಿರುವ ಸಾರ್ವಜನಿಕರಲ್ಲಿ ಎಚ್ಚರಿಕೆಯನ್ನು ನೀಡಬೇಕು ಎಂದು ತಿಳಿಸಿದರು.
ನದಿ ಪಾತ್ರದಲ್ಲಿರುವ ಜನರಲ್ಲಿ ಆರೋಗ್ಯ, ಊಟದ ವ್ಯವಸ್ಥೆ, ಮೂಲ ಸೌಕರ್ಯವನ್ನು ಕಲ್ಪಿಸಬೇಕು. ಜಿಲ್ಲೆಯಲ್ಲಿ ಹೆಚ್ಚು ಮಳೆಯಿಂದ ಶಾಲೆಗಳ ಮೇಲ್ಚವಾಣಿ ಹಾನಿಯಾಗಿದ್ದರೆ ಅದನ್ನು ಸರಿಪಡಿಸಿ ಮಾಹಿತಿ ನೀಡಬೇಕು. ಕಂಪ್ಲಿ ತಾಲ್ಲೂಕಿನಲ್ಲಿ ಒಂದು ವಾರದಿಂದ ಮಳೆ ಸುರಿತ್ತಿರುವುದರಿಂದ ಇಟಿಗಿ ಗ್ರಾಮದ ಹಳ್ಳದ ಮೇಲ್ಸೇತುವೆ ನೀರು ಹರಿಯುತ್ತಿದ್ದು, ಜನರಿಗೆ ಎಚ್ಚರಿಕೆಯನ್ನು ನೀಡಲು ಅಧಿಕಾರಿಗಳಿಗೆ ತಿಳಿಸಿದರು.
ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಆರಂಭವಾಗಿದ್ದು, ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಬಿಕ ದಾಸ್ತಾನನ್ನು ಪರಿಗಣಿಸಿ, ಯೂರಿಯಾ ರಸಗೊಬ್ಬರದ ಕಡಿಮೆ ಹಂಚಿಕೆ ಮಾಡಿರುವುದು ಕೊರತೆಗೆ ಮೂಲ ಕಾರಣವಾಗಿದೆ. ರಸಗೊಬ್ಬರದ ಬಗ್ಗೆ ಸ್ಥಳೀಯ ರೈತರಿಂದ ಮಾಹಿತಿಯನ್ನು ತಿಳಿದುಕೊಳ್ಳಬೇಕು. ತಾಲ್ಲೂಕುವಾರು ತಹಶೀಲ್ದಾರರು ಮತ್ತು ರೈತ ಸಂಪರ್ಕ ಕೇಂದ್ರ ಅಧಿಕಾರಿಗಳು ರೈತರಿಗೆ ಹೋಲ್ ಸೇಲ್, ರಿಟೇಲ್ ಅಂಗಡಿಗಳಿAದ ತೊಂದರೆಯಾದರೆ ಕ್ರಮವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪಿ.ಪ್ರಮೋದ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟ ಅಧಿಕಾರಿಗಳು ಇತರರು ಉಪಸ್ಥಿತರಿದರು.
-----------
ಮೆದುಳಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಿ: ಡಾ.ಬಸರೆಡ್ಡಿ .ಎನ್
ಬಳ್ಳಾರಿ,ಜು.29(ಕರ್ನಾಟಕ ವಾರ್ತೆ):
ಮಾನವನ ದೇಹದ ಪ್ರಮುಖ ಅಂಗ ಮೆದುಳಾಗಿದೆ. ಎಲ್ಲರೂ ಮೆದುಳಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಎನ್.ಬಸರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ಮುಂಭಾಗದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ “ಎಲ್ಲಾ ವಯಸ್ಸಿನವರಿಗೂ ಮೆದುಳಿನ ಆರೋಗ್ಯ” ಎಂಬ ಘೋಷವಾಕ್ಯದಡಿ “ವಿಶ್ವ ಮೆದುಳು ದಿನಾಚರಣೆ-2025” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮೆದುಳು ದೇಹದ ಅತ್ಯಂತ ಪ್ರಮುಖ ಅಂಗವಾಗಿದೆ. ಮೆದುಳು ಕಾರ್ಯ ನಿರ್ವಹಿಸದಿದ್ದಲ್ಲಿ ಮನುಷ್ಯರು ಪರಾವಲಂಬಿಯಾಗಿ ಬೇರೆಯವರಿಗೆ ಹೊರೆಯಾಗಬೆೆÃಕಾಗುತ್ತದೆ ಎಂದರು.
ನರರೋಗ ಸಂಬAಧಿಸಿದ ಆರೋಗ್ಯ ಕಾಯಿಲೆಗಳು ಹೆಚ್ಚುತ್ತಿರುವುದರಿಂದ ಸರ್ಕಾರವು ಯೋಜನೆ ಕೈಗೆತ್ತಿಕೊಂಡಿದೆ. ತಲೆನೋವು, ಪಾಶ್ರ‍್ವವಾಯು, ಮೂರ್ಛೆರೋಗ, ಪಾರ್ಕಿನ್ ಸನ್ ಕಾಯಿಲೆ ಮತ್ತು ಮರೆವಿನ ಕಾಯಿಲೆಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರಿಗೆ ಬಳಿ ತಪಾಸಣೆ ಒಳಪಟ್ಟು ಉಚಿತ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಮೆದುಳು ಆರೋಗ್ಯ ಕಾರ್ಯಕ್ರಮದಡಿ 2024ರಿಂದ ಜೂನ್ 2025ನೇ ಸಾಲಿನವರೆಗೂ 19,000 ಫಲಾನುಭವಿಗಳು ಮೆದುಳು ಆರೋಗ್ಯ ಚಿಕಿತ್ಸಾಲಯದಲ್ಲಿ ಉಚಿತ ಚಿಕಿತ್ಸೆ ಪಡೆದಿದ್ದಾರೆ ಎಂದು ವಿವರಿಸಿದರು. ಮೆದುಳಿನ ಆರೋಗ್ಯ ಚಿಕಿತ್ಸೆ ನೀಡುವಲ್ಲಿ ಬೇರೆ ಜಿಲ್ಲೆಗಳಿಗಿಂತ ನಮ್ಮ ಬಳ್ಳಾರಿ ಪ್ರಥಮ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯವಾಗಿದೆ. ಮೆದುಳು ಆರೋಗ್ಯ ಕಾರ್ಯಕ್ರಮದಡಿ ಮೆದುಳು ಮತ್ತು ನರ ಸಂಬAಧಿತ ರೋಗಿಗಳಿಗೆ ನಿತ್ಯ ಚಿಕಿತ್ಸೆ ಒದಗಿಸಿ ಔಷಧಗಳನ್ನು ನೀಡಲಾಗುತ್ತಿದೆ. ಮೆದುಳನ್ನು ಆರೋಗ್ಯವಾಗಿಡಲು ಸರಳ ದೈನಂದಿನ ಅಭ್ಯಾಸ ಜತೆಯಲ್ಲಿಯೇ ಜೀವನ ಶೈಲಿ ಆಯ್ಕೆ ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ನಿತ್ಯ ಒತ್ತಡದ ಕೆಲಸದ ನಡುವೆಯೂ ಎಂಟು ತಾಸು ನಿದ್ದೆ ಮಾಡಬೇಕು. ಮಾನಸಿಕ ಸಧೃಡಗೊಳ್ಳಲು ಒತ್ತಡ ನಿಯಂತ್ರಿಸಿ ಧೂಮಪಾನ ಮತ್ತು ಮದ್ಯಪಾನ ತ್ಯಜ್ಯಿಸಬೇಕು ಎಂದು ಹೇಳಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ವೀರೇಂದ್ರ ಕುಮಾರ್ ಕೆ.ಜಿ ಅವರು ಪ್ರಾಸ್ತವಿಕವಾಗಿ ಮಾತನಾಡಿ, ಮೆದುಳು ಆರೋಗ್ಯವಾಗಿರಲು ನಮ್ಮ ದೇಹವು ದೈಹಿಕ ಮತ್ತು ಮಾನಸಿಕ ಸಧೃಡವಾಗಿರಬೇಕು. ಮೆದುಳಿನ ಆರೋಗ್ಯದ ಬಗ್ಗೆ ನಿರ್ಲಕ್ಷö್ಯ ವಹಿಸಿದೆ ಕಾಳಜಿ ವಹಿಸಬೇಕು. ಮೆದುಳಿನ ಆರೋಗ್ಯದ ಜವಾಬ್ದಾರಿಯ ಬಗ್ಗೆ ಎಲ್ಲಾ ಸರಕಾರಿ ಸಂಸ್ಥೆಗಳು ಆರೋಗ್ಯ ವೃತ್ತಿಪರರು, ಆರೈಕೆದಾರರು, ನಾಗರಿಕರು ಎಲ್ಲರೂ ಸೇರಿ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಮೆದುಳು ದಿನವನ್ನು ಆಚರಿಸಲಾಗುತ್ತದೆ ಎಂದರು.
ಇದಕ್ಕೂ ಮುನ್ನ ಗಣ್ಯರೆಲ್ಲರೂ ಸೇರಿ ಕಾರ್ಯಕ್ರಮ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮೆದುಳು ಆರೋಗ್ಯ ಚಿಕಿತ್ಸಾ ಕೇಂದ್ರದಿAದ ಆಯೋಜಿಸಿದ್ದ “ಮೆದುಳು ಚುರುಕುಗೊಳಿಸುವ ಚಟುವಟಿಕೆ” ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ವಿಶ್ವನಾಥ್.ಕೆ., ಜಿಲ್ಲಾ ಆಸ್ಪತ್ರೆಯ ವಿಭಾಗೀಯ ಮುಖ್ಯಸ್ಥರು ಹಾಗೂ ತಜ್ಞ ವೈದ್ಯ ಡಾ.ಶ್ರೀಧರ್ ಎಮ್.ಆರ್., ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ನೋಡಲ್ ಅಧಿಕಾರಿ ಹಾಗೂ ತಜ್ಞ ವೈದ್ಯ ಡಾ.ರಾಕೇಶ್, ಜಿಲ್ಲಾ ಆಸ್ಪತ್ರೆಯ ಆಡಳಿತ ಸಹಾಯಕ ಅಧಿಕಾರಿಗಳಾದ ದುರುಗಪ್ಪ.ಟಿ., ರಜೀಯಾ ಬೇಗಂ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಸಣ್ಣಕೇಶವ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್ ಸೇರಿದಂತೆ ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ಸಿಬ್ಬಂದಿ ವರ್ಗ, ವೈದ್ಯಕೀಯ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
---------------
ಆ.01 ರಂದು ಶಾಸ್ತಿçÃಯ ನೃತ್ಯ ಕಲಿಕಾ ತರಬೇತಿ ಕಾರ್ಯಕ್ರಮ
ಬಳ್ಳಾರಿ,ಜು.29(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ “ಶಾಸ್ತಿçÃಯ ನೃತ್ಯ” ಕಲಿಕಾ ತರಬೇತಿ ಕಾರ್ಯಕ್ರಮವನ್ನು ಆ.01 ರಂದು ಸಂಜೆ 06 ಗಂಟೆಗೆ ನಗರದ ಪರಿಶಿಷ್ಟ ವರ್ಗಗಳ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಆಯೋಜಿಸಲಾಗಿದೆ.
ಕಲಬುರಗಿ ವಲಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪಿ.ರಾಜು ಅವರು ಅಧ್ಯಕ್ಷತೆ ವಹಿಸುವರು.
ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಾದಿಲಿಂಗಪ್ಪ, ನೃತ್ಯ ತರಬೇತಿ ಕಲಾವಿದರಾದ ಡಿ.ಇಂದ್ರಾಣಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------------
ಆ.02 ರಂದು “ಹಾಡಿರೇ ರಾಗಗಳ-ತೂಗಿರೇ ದೀಪಗಳ” ಸಂಗೀತ ಗಾಯನ ಕಾರ್ಯಕ್ರಮ
ಬಳ್ಳಾರಿ,ಜು.29(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿ “ಹಾಡಿರೇ ರಾಗಗಳ-ತೂಗಿರೇ ದೀಪಗಳ” ಸಂಗೀತ ಗಾಯನ ಕಾರ್ಯಕ್ರಮವನ್ನು ಆ.02 ರಂದು ಸಂಜೆ 06 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿರುವ ಸಾಂಸ್ಕçತಿಕ ಸಮುಚ್ಚಯದ ನಾಡೋಜ ಡಾ.ಸುಭದ್ರಮ್ಮ ಮನ್ಸೂರ್ ಬಯಲು ರಂಗಮAದಿರದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
*ಸಂಗೀತ ಗಾಯನ:*
ಬಳ್ಳಾರಿಯ ಎಸ್.ಎಂ ಹುಲುಗಪ್ಪ ಅವರ ತಂಡದಿAದ ಜಾನಪದ ಗೀತೆಗಳು, ಸಿರುಗುಪ್ಪದ ಅಂಬಣ್ಣ ದಳವಾಯಿ ಅವರಿಂದ ಸುಗಮ ಸಂಗೀತ, ಬಳ್ಳಾರಿಯ ಕೆ.ಜಡೇಶ್ ಅವರಿಂದ ಭಾವ ಗೀತೆಗಳು, ಸಿರುಗುಪ್ಪ ತಾಲ್ಲೂಕಿನ ಉತ್ತನೂರಿನ ರಾಮಪ್ಪ ಅವರಿಂದ ರಂಗ ಗೀತೆಗಳು, ಕುರುಗೋಡು ತಾಲ್ಲೂಕಿನ ಕಲ್ಲುಕಂಬದ ಬಿ.ಆನಂದ ಅವರಿಂದ ಕ್ರಾಂತಿ ಗೀತೆಗಳು, ಸಂಗನಕಲ್ಲಿನ ಉಷಾ ಅವರಿಂದ ವಚನ ಗೀತೆಗಳು, ರ‍್ರಗುಡಿಯ ಸುಂಕಪ್ಪ ಹೆಚ್.ಜಿ ಅವರಿಂದ ಹೋರಾಟ ಗೀತೆಗಳು, ಇಬ್ರಾಹಿಂಪುರದ ಹೆಚ್. ರ‍್ರಿಸ್ವಾಮಿ ಅವರಿಂದ ಕ್ರಾಂತಿ ಗೀತೆಗಳು, ಕುರುಗೋಡಿನ ಕೆ. ಹನುಮಂತಪ್ಪ ಜೋಗಿ ಅವರಿಂದ ಕಿನ್ನರಿ ಜೋಗಿ ಪದಗಳು, ಕಂಪ್ಲಿ ತಾಲ್ಲೂಕಿನ ಮೆಟ್ರಿಯ ಸಿ.ಡಿ.ಮೌನೇಶ್ ಅವರಿಂದ ತತ್ವಪದ ಮತ್ತು ದಾಸರ ಪದಗಳು, ಸಂಡೂರು ತಾಲ್ಲೂಕಿನ ಭುಜಂಗನಗರದ ತಾಯಪ್ಪ ಅವರಿಂದ ಹಿಂದುಸ್ತಾನಿ ಶಾಸ್ತಿçÃಯ ಸಂಗೀತ, ಸಂಗನಕಲ್ಲಿನ ಮಾರೆಮ್ಮ ಅವರಿಂದ ಸಂಪ್ರದಾಯ ಗೀತೆಗಳು, ಸಿರುಗುಪ್ಪ ತಾಲ್ಲೂಕಿನ ಅರಳಿಗನೂರಿನ ನೀಲಗಂಗಮ್ಮ ಅವರಿಂದ ಶೋಭಾನೆ ಪದಗಳು ಸೇರಿದಂತೆ ವಿವಿಧ ಸಂಗೀತ ಗಾಯನ ಇರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------------
ಆರೋಗ್ಯವಾಗಿರಲು ಶುದ್ಧ ನೀರನ್ನೇ ಕುಡಿಯಿರಿ: ಡಾ. ಯಲ್ಲಾ ರಮೇಶ್ ಬಾಬು
ಬಳ್ಳಾರಿ,ಜು.29(ಕರ್ನಾಟಕ ವಾರ್ತೆ):
ನಮ್ಮ ದೇಹಕ್ಕೆ ನೀರು ಅವಶ್ಯಕವಾಗಿದ್ದು, ಆರೋಗ್ಯವಾಗಿರಲು ಶುದ್ಧ ನೀರನ್ನು ಕುಡಿಯಬೇಕು. ಯಾವುದೇ ಕಾರಣಕ್ಕೂ ನದಿಯಲ್ಲಿನ ನೀರನ್ನು ಕುಡಿಯಲು ಬಳಸಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಅವರು ಹೇಳಿದರು.
ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಸಿರುಗುಪ್ಪ ತಾಲೂಕಿನ ಹಚೋಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಒಳಪಡುವ ಚಿಕ್ಕಬಳ್ಳಾರಿ, ಹಳೆ ಶ್ರೀಧರಗಡ್ಡೆ ಹಾಗೂ ಹಚ್ಚೋಳಿ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿ ಮಾತನಾಡಿದರು.
ನದಿಯ ನೀರು ಕುಡಿಯುವುದರಿಂದ ವಾಂತಿ-ಭೇದಿ, ಶೀತ ಜ್ವರ ಹಾಗೂ ಬ್ಯಾಕ್ಟೀರಿಯಾ ಸೋಂಕಿನ ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ. ನೀರಿನ ಹರಿಯುವ ಮಟ್ಟ ಹೆಚ್ಚಾಗಿ ಹಾವು, ಚೇಳು ಇತರೆ ವಿಷ ಜಂತುಗಳು ಜನವಾಸ ಪ್ರದೇಶಕ್ಕೆ ಬರುವ ಸಂಭವವಿದೆ. ನೀರಿನ ಹರಿವಿನಿಂದ ಅಪಾಯ ಸಂಭವಿಸುವ ಸಂದರ್ಭದಲ್ಲಿ ಸುರಕ್ಷಿತೆಗಾಗಿ ಎತ್ತರದ ಪ್ರದೇಶಗಳನ್ನು ಆಯ್ದುಕೊಳ್ಳಿ ಎಂದು ಗ್ರಾಮದ ಜನರಿಗೆ ಹೇಳಿದರು.
ಬಳಿಕ ಹಚ್ಚೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಾಲ್ಲೂಕು ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ, ನದಿ ಪಾತ್ರದ ಪ್ರದೇಶದ ಜನರಿಗೆ ಬೇಕಾಗುವಂತಹ ಔಷಧಿಗಳು, ಇಂಜೆಕ್ಷನ್‌ಗಳು, ಹಾವು ನಂಜು ನಿರೋಧಕ ಲಸಿಕೆಗಳು, ಓ.ಆರ್.ಎಸ್ ಪಾಕೆಟ್ಸ್, ನೆಗಡಿ ಕೆಮ್ಮು ಜ್ವರದ ಮಾತ್ರೆಗಳು, ಐ ವಿ ಫ್ಲೂಡ್‌ಗಳು, ಹ್ಯಾಲೋಜನ್ ಮಾತ್ರೆಗಳು, ಬ್ಲೀಚಿಂಗ್ ಪೌಡರ್ ಇತರೆ ಚಿಕಿತ್ಸಾ ಸೇವಾ ಸೌಲಭ್ಯಗಳು ಸಾಕಷ್ಟು ಪ್ರಮಾಣದಲ್ಲಿ ಮುಂಚೂಣಿಯಾಗಿ ಸಂಗ್ರಹಿಸಿ ಎಚ್ಚರಿಕೆ ವಹಿಸಬೇಕು ಹಾಗೂ ಅಪಾಯಕಾರಿ ಪ್ರದೇಶಗಳಲ್ಲಿನ ಜನಾರೋಗ್ಯ ಸಮೀಕ್ಷೆ ಪ್ರತಿದಿನ ನಡೆಸಲು ಮತ್ತು ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಸಮುದಾಯದಲ್ಲಿ ಗೃಹ ಆರೋಗ್ಯ ಕಾರ್ಯಕ್ರಮ, ಗರ್ಭಿಣಿ, ಗಂಡಾAತರ ಗರ್ಭಿಣಿಯರ ಕಾಳಜಿ, ಸುಸೂತ್ರ ಹೆರಿಗೆ ಸೌಲಭ್ಯ, ತಾಯಿ ಮಗುವಿನ ಆರೈಕೆ ಕುರಿತಂತೆ ಆರೋಗ್ಯ ಪರ ಕ್ರಮಗಳನ್ನು ಅನುಸರಿಸಬೇಕು ಎಂದು ಸಿಬ್ಬಂದಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಮೇಲ್ವಿಚಾರಕ ಟಿ. ವಿರೂಪಾಕ್ಷಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರವಿಕುಮಾರ್, ಪ್ರಾಥಮಿಕ ಸುರಕ್ಷತಾ ಅಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಶುಶ್ರೂಷಣಾಧಿಕಾರಿಗಳು ಸೇರಿದಂತೆ ಪ್ರಯೋಗಶಾಲ ತಂತ್ರಜ್ಞರು, ಔಷಧ ತಜ್ಞರು ಹಾಗೂ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.
----------------
ಸಿರುಗುಪ್ಪ ನಗರಸಭೆ: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಜು.29(ಕರ್ನಾಟಕ ವಾರ್ತೆ):
ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ 2019-20 ರಿಂದ 2025-26ನೇ ಸಾಲಿನ ಎಸ್.ಎಫ್.ಸಿ ಯೋಜನೆ ಮತ್ತು ನಗರಸಭೆ ನಿಧಿಯಡಿ ಶೇ.24.10 (ಎಸ್‌ಸಿಎಸ್‌ಪಿ, ಟಿಎಸ್‌ಪಿ), ಶೇ.7.25 ಮತ್ತು ಶೇ.5 ಅನುದಾನದಡಿ ವಿವಿಧ ಯೋಜನೆಗಳಡಿ ಸೌಲಭ್ಯಗಳಿಗಾಗಿ ಸಿರುಗುಪ್ಪ ನಗರದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಷ್ಟ್ 25 ಕೊನೆಯ ದಿನ.
*ಸೌಲಭ್ಯಗಳು:*
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕ ಖರೀದಿಸಲು ಸಹಾಯಧನ ಮತ್ತು ಎಂ.ಬಿ.ಬಿ.ಎಸ್ ಹಾಗೂ ಬಿ.ಇ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಸಲು ಸಹಾಯಧನ.
ಪರಿಶಿಷ್ಟ ಪಂಗಡ ವರ್ಗದ ಅರ್ಹರಿಗೆ ವೈಯಕ್ತಿಕ ಶೌಚಾಲಯಕ್ಕೆ ನಿರ್ಮಾಣಕ್ಕೆ ಸಹಾಯಧನ.
ಇತರೆ ಹಿಂದುಳಿದ ವರ್ಗಗಳ ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕ ಖರೀದಿಸಲು ಮತ್ತು ಎಂ.ಬಿ.ಬಿ.ಎಸ್ ಹಾಗೂ ಬಿ.ಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಸಲು, ಪಕ್ಕಾ ಮನೆ ನಿರ್ಮಾಣಕ್ಕೆ, ವೈಯಕ್ತಿಕ ಶೌಚಾಲಯಕ್ಕೆ ನಿರ್ಮಾಣಕ್ಕೆ ಸಹಾಯಧನ.
ವಿಶೇಷ ಚೇತನರಿಗೆ ಪಕ್ಕಾ ಮನೆ ನಿರ್ಮಾಣ, ಶೌಚಾಲಯ ನಿರ್ಮಾಣ ಮತ್ತು ಹೊಸದಾಗಿ ವಾರ್ಷಿಕ ಜೀವವಿಮೆ, ಎಲೆಕ್ಟಿçಕಲ್ ದ್ವಿಚಕ್ರ ಸ್ಕೂಟಿ ಪಡೆಯಲು ಸಹಾಯಧನ ನೀಡಲಾಗುವುದು.
*ಬೇಕಾದ ದಾಖಲೆ:*
ನಿಗದಿತ ಅರ್ಜಿ ನಮೂನೆ, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಐ.ಡಿ ಕಾರ್ಡ್, 2 ಫೋಟೋ, ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಸೌಲಭ್ಯ ಪಡೆಯದೇ ಇರುವ ಬಗ್ಗೆ ದೃಢೀಕರಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ಬಿ.ಇ, ಎಂ.ಬಿ.ಬಿ.ಎಸ್ ಮಾಡುತ್ತಿರುವ ಬಗ್ಗೆ ದೃಢೀಕರಣ ಪತ್ರ, ಪಕ್ಕಾ ಮನೆ/ಶೌಚಾಲಯ ನಿರ್ಮಾಣಕ್ಕಾಗಿ ಅರ್ಜಿದಾರರ ಹೆಸರಿನಲ್ಲಿರುವ ಆಸ್ತಿಯ ದಾಖಲೆಗಳು, ಅಂಗವಿಕಲತೆ ಇದ್ದಲ್ಲಿ ವೈದ್ಯಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ನಗರಸಭೆ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಸಿರುಗುಪ್ಪ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಸೋಮವಾರ, ಜುಲೈ 28, 2025
ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ ಕೇಂದ್ರಕ್ಕೆ ಆರು ಬಾರಿ ಮನವಿ | ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ
ಬಳ್ಳಾರಿ,ಜು.28(ಕರ್ನಾಟಕ ವಾರ್ತೆ):
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.
*ರಸಗೊಬ್ಬರ ಕೊರತೆಗೆ ಮೂಲ ಕಾರಣ:*
ಪ್ರಸ್ತಕ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಬಿಕ ದಾಸ್ತಾನನ್ನು ಪರಿಗಣಿಸಿ, ಯೂರಿಯಾ ರಸಗೊಬ್ಬರದ ಕಡಿಮೆ ಹಂಚಿಕೆ ಮಾಡಿರುವುದು ಕೊರತೆಗೆ ಮೂಲ ಕಾರಣವಾಗಿದೆ.
ರಾಜ್ಯದ ಬೆಳೆ ಪದ್ಧತಿಯನ್ನು ಆಧರಿಸಿ ಮುಂಗಾರು ಹಂಗಾಮಿಗೆ ಮುಂಚಿತವಾಗಿ ಕೇಂದ್ರ ಸರ್ಕಾರಕ್ಕೆ 12.95 ಲಕ್ಷ ಮೆ.ಟನ್ ಯೂರಿಯಾ ರಸಗೊಬ್ಬರ ಬೇಡಿಕೆಯನ್ನು ಸಲ್ಲಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರದಿಂದ 11.17 ಲಕ್ಷ ಮೆ.ಟನ್ ಹಂಚಿಕೆ ನಿಗದಿಪಡಿಸಲಾಗಿರುತ್ತದೆ.
ಏಪ್ರಿಲ್ ಮಾಹೆಯಿಂದ ಜುಲೈ ಮಾಹೆಯವರೆಗೆ 3.02ಲಕ್ಷ ಮೆ.ಟನ್ ಡಿ.ಎ.ಪಿ ರಸಗೊಬ್ಬರದ ಬೇಡಿಕೆ ಇದ್ದು ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 2.21 ಲಕ್ಷ ಮೆ.ಟನ್ ಸರಬರಾಜಾಗಿದ್ದು, ಇನ್ನೂ 81,000 ಮೆ.ಟನ್ ಸರಬರಾಜು ಬಾಕಿ ಇರುತ್ತದೆ.
ರಾಜ್ಯದಲ್ಲಿ ಡಿ.ಎ.ಪಿ. ಕೊರತೆ ಕಂಡು ಬಂದಾಗ ಕೃಷಿ ಸಚಿವರ ನಿರ್ದೇಶನದಂತೆ ಪರ್ಯಾಯ ರಸಗೊಬ್ಬರಗಳ ಬಳಕೆ ಕುರಿತು ರೈತರಲ್ಲಿ ಅರಿವು ಮೂಡಿಸಿ, ಪ್ರಸ್ತುತ, ಡಿ.ಎ.ಪಿ. ರಸಗೊಬ್ಬರದ ಕೊರತೆಯನ್ನು ನೀಗಿಸಲಾಗಿದೆ.
ಏಪ್ರಿಲ್ ಮಾಹೆಯಿಂದ ಜುಲೈ ಮಾಹೆಯವರೆಗೆ 6.80 ಲಕ್ಷ ಮೆ.ಟನ್ ಯೂರಿಯಾ ರಸಗೊಬ್ಬರದ ಬೇಡಿಕೆ ಇದ್ದು, ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 5.35 ಲಕ್ಷ ಮೆ.ಟನ್ ಸರಬರಾಜಾಗಿದ್ದು, ಇನ್ನೂ 1.45 ಲಕ್ಷ ಮೆ.ಟನ್ ಸರಬರಾಜು ಬಾಕಿ ಇರುತ್ತದೆ.
ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ಸರಬರಾಜು ಮಾಡಿರುವ ರಸಗೊಬ್ಬರವನ್ನು ಸಮರ್ಪಕವಾಗಿ ಎಲ್ಲಾ ಜಿಲ್ಲೆಗಳಿಗೆ ಹಂಚಿಕೆ ಮಾಡಿ ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿಭಾಯಿಸಲಾಗಿರುತ್ತದೆ.
*ರಾಜ್ಯದಿಂದ ರಸಗೊಬ್ಬರ ಪೂರೈಕೆಗೆ ಆರು ಬಾರಿ ಮನವಿ:*
ಕೇಂದ್ರ ರಸಗೊಬ್ಬರ ಇಲಾಖೆಯ ಅಧಿಕಾರಿಗಳಿಗೆ ಕೃಷಿ ಇಲಾಖೆ ವತಿಯಿಂದ ಏಪ್ರಿಲ್ ಮಾಹೆಯಿಂದ ಇಲ್ಲಿಯವರೆಗೆ ಆರು ಬಾರಿ ಪತ್ರಗಳನ್ನು ಬರೆದು ಹಂಚಿಕೆಗೆ ಅನುಗುಣವಾಗಿ ಅವಶ್ಯವಿರುವ ಡಿ.ಎ.ಪಿ ಮತ್ತು ಯೂರಿಯಾ ರಸಗೊಬ್ಬರಗಳ ಪೂರೈಕೆ ಮಾಡಲು ಮನವಿ ಮಾಡಲಾಗಿರುತ್ತದೆ.
ರಾಜ್ಯದ ಕೃಷಿ ಸಚಿವರು ಕೇಂದ್ರ ಸರ್ಕಾರದ ರಸಗೊಬ್ಬರ ಖಾತೆ ಸಚಿವರಿಗೆ ಅಗತ್ಯವಿರುವ ಡಿ.ಎ.ಪಿ. ರಸಗೊಬ್ಬರದ ಪೂರೈಕೆಗೆ ಪತ್ರ ಮುಖೇನ ಮನವಿ ಸಲ್ಲಿಸಿದ್ದಾರೆ. ಅಲ್ಲದೇ, ಕೃಷಿ ಸಚಿವರೇ ಖುದ್ದಾಗಿ, ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವರನ್ನು ಇದೇ ಜುಲೈ 7 ರಂದು ಭೇಟಿ ಮಾಡಿ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ಅಗತ್ಯವಿರುವ ರಸಗೊಬ್ಬರಗಳ ಪೂರೈಕೆ ಮಾಡಲು ಮನವಿ ಮಾಡಿರುತ್ತಾರೆ.
ರಾಜ್ಯದಲ್ಲಿ ಡಿ.ಎ.ಪಿ ಮತ್ತು ಯೂರಿಯಾ ರಸಗೊಬ್ಬರದ ಕಡಿಮೆ ಪೂರೈಕೆಯನ್ನು ಮನಗಂಡು, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ರಸಗೊಬ್ಬರ ಖಾತೆ ಸಚಿವರಿಗೆ, ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರ ಪೂರೈಕೆಗೆ ಜುಲೈ 17 ಮತ್ತು 25ರಂದು ಪತ್ರ ಮುಖೇನ ಮನವಿ ಸಲ್ಲಿಸಿರುತ್ತಾರೆ. ಪ್ರಸ್ತುತ ಕೇಂದ್ರ ಸರ್ಕಾರದಿಂದ ಹಂಚಿಕೆಗನುಗುಣವಾಗಿ ಯೂರಿಯಾ ರಸಗೊಬ್ಬರವನ್ನು ಸರಬರಾಜು ಮಾಡದಿರುವುದರಿಂದ ರಾಜ್ಯದಲ್ಲಿ ಅಲ್ಲಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಕಂಡು ಬಂದಿರುತ್ತದೆ. ಈ ಸಂಬAಧವಾಗಿ ರೈತರು ವಿವಿಧ ಜಿಲ್ಲೆಗಳಲ್ಲಿ ಯೂರಿಯಾ ರಸಗೊಬ್ಬರದ ಪೂರೈಕೆ ಬಗ್ಗೆ ಅಹವಾಲುಗಳನ್ನು ಸಲ್ಲಿಸಿರುತ್ತಾರೆ.
*ಯೂರಿಯಾ ಬೇಡಿಕೆ ಪ್ರಮುಖ ಕಾರಣಗಳು:*
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮುಂಚಿತವಾಗಿ ಉತ್ತಮ ಮಳೆಯಾಗಿದ್ದು, ಸಾಮಾನ್ಯ ಅವಧಿಗಿಂತ ಮುಂಚೆ ಬಿತ್ತನೆ ಪ್ರಾರಂಭವಾಗಿದೆ. ಇಲ್ಲಿಯವರೆಗೆ ಬಿತ್ತನೆ ವಿಸ್ತೀರ್ಣ ಹಿಂದಿನ ಸಾಲಿಗೆ ಹೋಲಿಸಿದಲ್ಲಿ ಹೆಚ್ಚಾಗಿರುತ್ತದೆ. ಹೆಚ್ಚು ರಸಗೊಬ್ಬರ ಅವಶ್ಯವಿರುವ ಮುಸುಕಿನ ಜೋಳದ ವಿಸ್ತೀರ್ಣವು ಅಂದಾಜು 2.00ಲಕ್ಷ ಹೆಕ್ಟೇರ್ ಗಣನೀಯವಾಗಿ ಹೆಚ್ಚಳವಾಗಿದೆ. ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಅಂದಾಜು 13,000 ಹೆಕ್ಟೇರ್ ಪ್ರದೇಶದಲ್ಲಿ ಮರುಬಿತ್ತನೆ ಕೈಗೊಳ್ಳಲಾಗಿರುತ್ತದೆ. ತುಂಗಭದ್ರಾ, ಕೃಷ್ಣಾ, ಕಾವೇರಿ ಇತ್ಯಾದಿ ಪ್ರಮುಖ ಜಲಾಶಯಗಳಿಂದ ಅವಧಿಗಿಂತ ಮುಂಚಿತವಾಗಿ ಅಚ್ಚುಕಟ್ಟು ಪ್ರದೇಶಗಳಿಗೆ ನೀರನ್ನು ಬಿಟ್ಟಿರುವುದರಿಂದ ಮುಂಚಿತವಾಗಿ ನಾಟಿ ಕೈಗೊಳ್ಳಲಾಗಿರುವುದು ಯೂರಿಯಾ ಮತ್ತು ರಸಗೊಬ್ಬರ ಬೇಡಿಕೆ ಪ್ರಮುಖ ಕಾರಣವಾಗಿದೆ.
ಇಲಾಖೆಯ ಅಧಿಕಾರಿಗಳು ಪ್ರತಿ ಮಂಗಳವಾರ ಕೇಂದ್ರ ಸರ್ಕಾರದಿಂದ ಜರುಗಿಸುವ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರಗಳ ಪೂರೈಕೆ ಮಾಡುವಂತೆ ಮನವಿ ಸಲ್ಲಿಸಿರುತ್ತಾರೆ. ಅಲ್ಲದೇ, ಕೇಂದ್ರ ಸರ್ಕಾರದ ರಸಗೊಬ್ಬರ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಾಜ್ಯದಲ್ಲಿ ಅವಶ್ಯವಿರುವ ರಸಗೊಬ್ಬರ ಪೂರೈಕೆಗೆ ಅವಶ್ಯ ಕ್ರಮ ವಹಿಸುತ್ತಿದ್ದಾರೆ.
ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ಪರಿಸರ ಸ್ನೇಹಿಯಾಗಿರುವ ನ್ಯಾನೋ ರಸಗೊಬ್ಬರ ಬಳಕೆಗೆ ಇಲಾಖೆಯಿಂದ ವ್ಯಾಪಕ ಪ್ರಚಾರ ನೀಡಿ ಅರಿವು ಮೂಡಿಸಲಾಗುತ್ತಿದೆ. ಬೆಳೆ, ಮಣ್ಣು, ಮಾನವ, ಜಾನುವಾರು ಮತ್ತು ಪರಿಸರದ ಆರೋಗ್ಯದ ದೃಷ್ಟಿಯಿಂದ ಯೂರಿಯಾ ಬಳಕೆಯನ್ನು ಕಡಿತಗೊಳಿಸಲು ರೈತರಲ್ಲಿ ಮನವಿ ಮಾಡಲಾಗಿದೆ.
ಆರಂಭಿಕ ಶುಲ್ಕ ಪರಿಗಣಿಸದೆ ಕೊರತೆಯಾಗಿರುವ 81,000 ಮೆ.ಟನ್ ಡಿ.ಎ.ಪಿ. ಮತ್ತು 1,45,000 ಮೆ.ಟನ್. ಯೂರಿಯಾ ರಸಗೊಬ್ಬರವನ್ನು ಕೇಂದ್ರ ಸರ್ಕಾರವು ಪೂರೈಸಿದಲ್ಲಿ ರೈತರ ಬವಣೆ ನೀಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸಹ ಅಗತ್ಯ ಕ್ರಮ ಜರುಗಿಸಬೇಕಾಗಿದೆ ಎಂದು ಪ್ರಕಟಣೆ ತಿಳಿಸಿದೆ.
-----------
“ಮಕ್ಕಳ ರಕ್ಷಣೆಗೆ ಕಾನೂನುಗಳು” ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ನ್ಯಾಯಾಧೀಶೆ ಕೆ.ಜಿ.ಶಾಂತಿ ಅಭಿಪ್ರಾಯ | ಮಕ್ಕಳಿಗೆ ಉತ್ತಮ ಪರಿಸರ ನೀಡೋಣ
ಬಳ್ಳಾರಿ,ಜು.26(ಕರ್ನಾಟಕ ವಾರ್ತೆ):
ಮಕ್ಕಳ ರಕ್ಷಣೆಗೆ ಕಾಯ್ದೆ-ಕಾನೂನು ರೂಪಿಸುವುದು ಮಾತ್ರವಲ್ಲದೇ, ಅವರ ಬೆಳವಣಿಗೆಗೆ ಉತ್ತಮ ಪರಿಸರವನ್ನು ಸಹ ನೀಡಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ ಶಾಂತಿ ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರೀಡ್ಸ್ ಸಂಸ್ಥೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಅರಣ್ಯ ಇಲಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ವಿಸಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ “ಮಕ್ಕಳ ರಕ್ಷಣೆಗೆ ಕಾನೂನುಗಳು” ಎಂಬ ಪುಸ್ತಕ ಬಿಡುಗಡೆಗೊಳಿಸಿ, ಬಳಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ದೇವರ ಸಮಾನ. ಅವರು ಬೆಳವಣಿಗೆಯ ಪೂರಕವಾದ ಮನೆ, ಶಾಲೆ ವಾತಾವರಣದ ಸುತ್ತಮುತ್ತಲಿನಲ್ಲಿ ಗುಣಮಟ್ಟದ ಪರಿಸರ ಕಲ್ಪಿಸಬೇಕಿದೆ ಎಂದರು.
ದೇಶದಲ್ಲಿ ಬಾಲಕಾರ್ಮಿಕರು, ಭಿಕ್ಷಾಟನೆ, ಮಾನವ ಕಳ್ಳ ಸಾಗಾಣಿಕೆ, ಬಾಲ್ಯ ವಿವಾಹ, ಪೋಕ್ಸೋದಂತಹ ಬೆಳವಣಿಗೆಗಳು ಕಂಡುಬರುತ್ತಿರುವುದು ವಿಷಾಧನೀಯ ಸಂಗತಿಯಾಗಿದ್ದು, ಬಡತನ ಮತ್ತು ಶಿಕ್ಷಣ ಕೊರತೆ ಪ್ರಮುಖ ಕಾರಣವಾಗಿದೆ ಎಂದರು.
ಮಕ್ಕಳ ರಕ್ಷಣೆಯಲ್ಲಿ ಎನ್ ಜಿಒ ಗಳ ಪಾತ್ರವೂ ಸಹ ಮುಖ್ಯವಾಗಿದ್ದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರೀಡ್ಸ್ ಸಂಸ್ಥೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಈ ಪುಸ್ತಕ ಹೊರತರಲಾಗಿದ್ದು, ಶಾಲೆಗಳು, ಗ್ರಂಥಾಲಯಗಳಲ್ಲಿ ಇರಿಸಲಾಗುವುದು. ಮುಖ್ಯವಾಗಿ ಶಾಲೆಗಳಲ್ಲಿ ಮುಂಜಾನೆಯ ಪ್ರಾರ್ಥನೆಯ ನಂತರ ಬಾಲ್ಯ ವಿವಾಹ, ಪೋಕ್ಸೊ ಕಾಯ್ದೆಗಳ ಕುರಿತು ಮಾಹಿತಿ ನೀಡಬೇಕು. ಬಾಲ್ಯವಿವಾಹವಾಗುವುದಿಲ್ಲ ಎಂದು ಮಕಳ್ಳಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲು ತಿಳಿಸಬೇಕು ಎಂದರು.
“ಮಗುವಿಗೊಂದು ಮರ-ಶಾಲೆಗೊಂದು ವನ ಅಭಿಯಾನ” ಕಾರ್ಯಕ್ರಮದಡಿ ಎಲ್ಲಾ ಶಾಯೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡು, ಅವುಗಳ ಪೋಷಣೆಯ ಹೊಣೆಗಾರಿಗೆ ಮಕ್ಕಳಿಗೆ ನೀಡಬೇಕು. ಮಕ್ಕಳಿಗೆ ಕಾಯ್ದೆ-ಕಾನೂನುಗಳು ಎಷ್ಟು ಮುಖ್ಯವೋ, ಪರಿಸರದಲ್ಲಿ ಗಿಡ-ಮರಗಳು ಅಷ್ಟೇ ಮುಖ್ಯವಾಗಿದೆ ಎಂದರು.
ಇದೇ ವೇಳೆ ನ್ಯಾಯಾಧೀಶರು ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯವಾಗಿದೆ . ಮಕ್ಕಳ ರಕ್ಷಣೆಗಿರುವ ಕಾನೂನುಗಳನ್ನು ಪ್ರತಿಯೊಬ್ಬರೂ ತಿಳಿದು, ಇತರರಿಗೂ ತಿಳಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಎಲ್ಲಾ ಇಲಾಖೆಗಳು ಸೇರಿ ಕೈಜೋಡಿಸೋಣ ಎಂದರು.
ರೀಡ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಡಾ.ಹೆಚ್.ಸಿ.ರಾಘವೇಂದ್ರ ಅವರು ಪುಸ್ತಕ ಪರಿಚಯ ಮಾಡಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಜನಾರ್ಧನ ಅವರು ಕಾರ್ಯಾಗಾರ ನಡೆಸಿದರು.
ಕಾರ್ಯಕ್ರಮಕ್ಕೂ ಮುನ್ನ “ಮಗುವಿಗೊಂದು ಮರ-ಶಾಲೆಗೊಂದು ವನ ಅಭಿಯಾನ” ಕಾರ್ಯಕ್ರಮದಡಿ ನ್ಯಾಯಾಲಯದ ಆವರಣದಲ್ಲಿ ಗಣ್ಯರು ಗಿಡ ನೆಟ್ಟು ನಿರೂಣಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಬಳ್ಳಾರಿ ಪ್ರಾದೇಶಿಕ ವಿಭಾಗದ ಅರಣ್ಯ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ತೋಶನ್ ಕುಮಾರ್ ಸೇರಿದಂತೆ ಜಿಲ್ಲಾ ನ್ಯಾಯಾಲಯದ ವಿವಿಧ ನ್ಯಾಯಾಧೀಶರು, ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿ.ಆರ್.ಸಿ., ಸಿ.ಆರ್.ಸಿ ಇ.ಸಿ.ಓ, ಕಾರ್ಮಿಕ ಅಧಿಕಾರಿಗಳು, ಪಿ.ಡಿ-ಎನ್.ಸಿ.ಎಲ್.ಪಿ, ಮಕ್ಕಳ ವಿಶೇಷ ಪೊಲೀಸ್ ಘಟಕ ಸಿಬ್ಬಂಧಿಗಳು, ಡಿ.ಸಿ.ಪಿ.ಓ ಸಿಬ್ಬಂದಿಗಳು, ಚೈಲ್ಡ್ ಲೈನ್ ಸಿಬ್ಬಂಧಿಗಳು, ಅಂಗನವಾಡಿ ಮೇಲ್ವಿಚಾರಕರು, ಪ್ಯಾರಾ ಲೀಗಲ್ ವಾಲೆಂಟೀಯರ್ಸ್, ಎಲ್ಲಾ ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರುಗಳು, ರೀಡ್ಸ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)














































