ಗುರುವಾರ, ಜುಲೈ 31, 2025

ಆ.01 ರಂದು ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 01 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣ ಹೊಂಗಿರಣದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸತ್ಯಂ ಶಿಕ್ಷಕರ ಶಿಕ್ಷಣ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಬಾಷ ಅವರು ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿ ಹಿಂದೂಸ್ತಾನಿ ಗಾಯಕ ನಾಗಭೂಷಣ ಬಾಪುರೆ ಅವರಿಂದÀ ವಚನ ಸಂಗೀತ ಪ್ರಸ್ತುತಪಡಿಸುವರು. ಬಳ್ಳಾರಿಯ ಅಮಾತಿ ಬಸವರಾಜ್ ಕಾರ್ಯಕ್ರಮ ನಿರೂಪಿಸುವರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂ ರಾವ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ