ಬುಧವಾರ, ಜುಲೈ 9, 2025
ಜು.10 ರಂದು ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮ
ಬಳ್ಳಾರಿ,ಜು.09(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶಿವಶರಣ ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮವನ್ನು ಜು.10 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಹಡಪದ ಅಪ್ಪಣ ಸೇವಾ ಸಮಿತಿಯ ಅಧ್ಯಕ್ಷ ಹೆಚ್.ರುದ್ರಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿಯ ನಿವೃತ್ತಿ ಮುಖ್ಯಗುರುಗಳಾದ ಸಿ.ಕೊಟ್ರಪ್ಪ ಅವರು ಜಯಂತಿ ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಸಿರುಗುಪ್ಪದ ವಿರೇಶ ದಳವಾಯಿ ಅವರಿಂದÀ ವಚನ ಸಂಗೀತ ಇರಲಿದೆ.
*ಮೆರವಣಿಗೆ:
ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 09.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಮೆರವಣಿಗೆ ನಡೆಯಲಿದ್ದು, ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಹಳೇ ಬ್ರೂಸ್‌ಪೇಟೆ ಪೊಲೀಸ್ ಠಾಣೆ ರಸ್ತೆ-ತೇರು ಬೀದಿ-ಹೆಚ್.ಆರ್.ಗವಿಯಪ್ಪ ವೃತ್ತ-ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ದವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ