ಬುಧವಾರ, ಜುಲೈ 23, 2025

ಆ.15 ರಂದು ಜಿಲ್ಲಾ ಕೇಂದ್ರದಲ್ಲಿ 79 ನೇ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮ | ಅಚ್ಚುಕಟ್ಟಾಗಿ ಆಯೋಜಿಸಲು ಸಕಲ-ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಜು.23(ಕರ್ನಾಟಕ ವಾರ್ತೆ): ಬರುವ ಆಗಸ್ಟ್ 15 ರಂದು 79 ನೇ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಲು ಬೇಕಾದ ಎಲ್ಲಾ ರೀತಿಯ ಸಕಲ-ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಜಿಲ್ಲಾ ಕೇಂದ್ರದಲ್ಲಿ 79 ನೇ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತಂತೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ನಡೆಯುವ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಕೃಷ್ಣೇ ಬೈರೇಗೌಡ ಅವರು ಧ್ವಜಾರೋಹಣ ನೆರವೇರಿಸಿ, ಧ್ವಜಾರೋಹಣದ ಸಂದೇಶ ನೀಡುವರು. ಹಾಗಾಗಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿಯ ಮಾಹಿತಿ ಮತ್ತು ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕಾರ್ಯದ ಪೂರ್ಣ ಮಾಹಿತಿ ಲಭ್ಯತೆಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಕೇಂದ್ರದಲ್ಲಿ ಆ.15 ರಂದು ಬೆಳಿಗ್ಗೆ 08 ಕ್ಕೆ ನಗರದ ಡಾ.ರಾಜ್‌ಕುಮಾರ್ ಉದ್ಯಾನವನದ ಮಹಾತ್ಮ ಗಾಂಧೀಜಿಯವರ ಪುತ್ಥಳಿಗೆ ಪುಷ್ಪಾರ್ಚನೆ, 8.15 ಕ್ಕೆ ಹೆಚ್.ಆರ್.ಗವಿಯಪ್ಪ ವೃತ್ತದ ಬಳಿ ಬೃಹತ್ ಸ್ಥಂಬದಲ್ಲಿ ಧ್ವಜಾರೋಹಣಾ, 8.30 ಕ್ಕೆ ಬಿಎಂಸಿಆರ್‌ಸಿ ಬಳಿಯ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ, 8.45 ಕ್ಕೆ ಬಿಎಂಸಿಆರ್‌ಸಿ ಮೈದಾನದಲ್ಲಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ, ತುಕಡಿಗಳಿಂದ ಪರೇಡ್ ವೀಕ್ಷಣೆಯ ಬಳಿಕ 09 ಗಂಟೆಗೆ ಧ್ವಜಾರೋಹಣಾ ನೆರವೇರಿಸಿ ಸಂದೇಶ ನೀಡುವರು ಎಂದು ತಿಳಿಸಿದರು. ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿದ್ದು, ಎಲ್ಲರ ಸಹಮತ, ಸಹಭಾಗಿತ್ವ ಮತ್ತು ಸಮನ್ವಯತೆಯೊಂದಿಗೆ ಯಾವುದೇ ಲೋಪದೋಷವಾಗದಂತೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಕ್, ಶಾಮಿಯಾನ, ಆಸನಗಳು, ಉಪಹಾರ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಹಾಗೂ ಇತರೆ ವ್ಯವಸ್ಥೆಗಳನ್ನು ಪರಿಪೂರ್ಣವಾಗಿ ಸಿದ್ಧತೆಯಲ್ಲಿಟ್ಟುಕೊಳ್ಳಬೇಕು. ಮುಖ್ಯವಾಗಿ ಹವಮಾನ ಕುರಿತು ಅಗತ್ಯ ಮುಂಜಾಗ್ರತೆ ವಹಿಸಬೇಕು. ಯಾವುದೇ ಕೊರತೆಯಾಗದಂತೆ ಸುವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಪರೇಡ್ ಆಯೋಜನೆಗೆ ಸಂಬAಧಿಸಿದAತೆ ಅಗತ್ಯ ತಕ್ಕಂತೆ ಶಾಲಾ ತಂಡಗಳನ್ನು ಆಯ್ದುಕೊಂಡು ಪೂರ್ವ ತಯಾರಿ ನಡೆಸಬೇಕು. ಈ ಸಂದರ್ಭದಲ್ಲಿ ಲಘು ಉಪಹಾರ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ರಾಷ್ಟç ಮತ್ತು ರಾಜ್ಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಲಾಗುವುದು. ಸಮಿತಿ ರಚಿಸಿ ಅರ್ಹರನ್ನು ಆಯ್ಕೆ ಮಾಡಬೇಕು. ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಕಾರ್ಯಕ್ರಮ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ನಿರಂತರವಾಗಿರಬೇಕು. ಅಡಚಣೆ ಉಂಟಾದಲ್ಲಿ ಪರ್ಯಾಯ ವ್ಯವಸ್ಥೆ ಸಿದ್ಧತೆಯಲ್ಲಿಟ್ಟುಕೊಂಡಿರಬೇಕು ಎಂದರು. ಸಚಿವರ ಸಂದೇಶದ ಬಳಿಕ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಪೂರಕವಾದ ಗೀತೆಗಳ ನೃತ್ಯ ಆಯೋಜಿಸಬೇಕು ಮತ್ತು ಅದೇ ದಿನದಂದು ಸಂಜೆ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು. *ಕಡ್ಡಾಯವಾಗಿ ಪಾಲ್ಗೊಳ್ಳಿ:* ರಾಷ್ಟಿçÃಯ ಹಬ್ಬಗಳಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಭಾಗವಹಿಸಬೇಕು. ಈ ಕುರಿತು ಜಿಲ್ಲಾ ಮಟ್ಟದ ಎಲ್ಲಾ ಕಚೇರಿಗಳಿಗೆ ಆದೇಶ ಹೊರಡಿಸಲಾಗುವುದು ಎಂದರಲ್ಲದೇ, ಅಧಿಕಾರಿಗಳು ತಮ್ಮ-ತಮ್ಮ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಅದೇರೀತಿಯಾಗಿ ನಗರದ ಮುಖ್ಯ ವೃತ್ತಗಳನ್ನು ಸಹ ದೀಪಾಲಂಕಾರ ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಸಹಾಯಕ ಆಯುಕ್ತ ಪ್ರಮೋದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ