ಬುಧವಾರ, ಜುಲೈ 16, 2025
ಜು.18 ರಂದು ಮೇಲ್ವಿಚಾರಣಾ ಸಮಿತಿ ಸಭೆ
ಬಳ್ಳಾರಿ,ಜು.16(ಕರ್ನಾಟಕ ವಾರ್ತೆ):
ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರ ಸೆಕ್ಷನ್-11ರ ಪ್ರಕಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿದ್ದು, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಜು.18 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಏರ್ಪಡಿಸಲಾಗಿದೆ.
ಮುಂದುವರೆದು ಕೇಂದ್ರ ವಲಯ/ರಾಜ್ಯ ವಲಯ/ಜಿಲ್ಲಾ ವಲಯದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ 2024-25ನೇ ಸಾಲಿನ 2025 ರ ಮಾರ್ಚ್ನಿಂದ ಜೂನ್ ಅಂತ್ಯದವರೆಗಿನ ಪ್ರಗತಿ ವರದಿಗಳನ್ನು ಸಮಿತಿ ಪರಿಶೀಲಿಸಲಿದೆ. ಸಂಬAಧಪಟ್ಟ ಇಲಾಖೆಗಳು ಅಗತ್ಯ ಮಾಹಿತಿಗಳೊಂದಿಗೆ ಸಭೆಗೆ ಹಾಜರಾಗಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ