ಮಂಗಳವಾರ, ಜುಲೈ 15, 2025
ಜು.19 ರಂದು ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ
ಬಳ್ಳಾರಿ,ಜು.15(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ”ವನ್ನು ಜುಲೈ 19 ರಂದು ಬೆÀಳಿಗ್ಗೆ 09 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಶ್ರೀ ಯಲ್ಲಮ್ಮದೇವಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಸಿರುಗುಪ್ಪ ವಿಧಾನಸಭೆ ಕ್ಷೇತ್ರದ ಶಾಸಕ ಬಿ.ಎಂ. ನಾಗರಾಜ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ನಾರಾ ಭರತ್ ರೆಡ್ಡಿ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಸಿರುಗುಪ್ಪ ನಗರಸಭೆ ಅಧ್ಯಕ್ಷರಾದ ಬಿ. ರೇಣುಕಮ್ಮ, ಶ್ರೀ ಯಲ್ಲಮ್ಮದೇವಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಅಧ್ಯಕ್ಷ ವೈ.ಡಿ. ವೆಂಕಟೇಶ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
*ಸಾಂಸ್ಕೃತಿಕ ಕಾರ್ಯಕ್ರಮಗಳು:*
ಕಾರ್ಯಕ್ರಮದಲ್ಲಿ ಬಳ್ಳಾರಿಯ ವೀರ ಪಂಚಾಕ್ಷರಿ ಅವರಿಂದ ಕೊಳಲು ವಾದನ, ಗೌರಿ ಸೃಜನÀ ತಂಡದಿAದ ಸುಗಮ ಸಂಗೀತ, ಸೂರ್ಯ ಕಲಾ ಟ್ರಸ್ಟ್ ಸಂಗಡಿಗರಿAದ ಸಮೂಹ ನೃತ್ಯ, ಬಿ.ಸನ್ನಿದಿ ಜಿ.ಎಮ್ ತಂಡದಿAದ ಜಾನಪದ ಗೀತೆ, ಸಿರುಗುಪ್ಪದ ಬಿ.ನವ್ಯ ಅವರಿಂದ ಏಕಪಾತ್ರಭಿನಯ (ತಾಯಿಯ ಮಮತೆ), ಜೆ.ಎಸ್.ಸಾಹಿತ್ಯ ಮತ್ತು ಸಂಗಡಿಗರಿAದ ಮೊಬೈಲ್ ಲೋಕ ನಾಟಕ ಸೇರಿದಂತೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ