ಗುರುವಾರ, ಜುಲೈ 17, 2025

ಕುರುಗೋಡು: ಜು.19 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜು.17(ಕರ್ನಾಟಕ ವಾರ್ತೆ): ಕುರುಗೊಡು ಉಪ-ಕೇಂದ್ರ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ವಿತರಣಾ ಕೇಂದ್ರದ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/11ಕೆವಿ ಯ ಉಪಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಜು.19 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* 110/11ಕೆ.ವಿ ಕುರುಗೋಡು ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಫೀಡರ್‌ಗಳು ಮತ್ತು ಎಫ್-15 ಸೋಲಾರ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಜು.19 ರಂದು ಉಪ-ಕೇಂದ್ರದ ಎಲ್ಲಾ ಕೃಷಿ ಮಾರ್ಗಗಳನ್ನು ರಾತ್ರಿ 12 ಗಂಟೆಯಿAದ ಬೆಳಿಗ್ಗೆ 07 ಗಂಟೆಯವರೆಗೆ ವಿದ್ಯುತ್ ಸರಬರಾಜು ಚಾಲನೆಗೊಳಿಸಲಾಗುವುದು. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಕುರುಗೋಡು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಾಜೇಂದ್ರ ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ