ಗುರುವಾರ, ಜುಲೈ 17, 2025

ಜು.19 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜು.17(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ 110ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಎಲ್‌ಐಎಲ್‌ಓ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/11ಕೆ.ವಿ ಯ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಜು.19 ರಂದು ಬೆಳಗ್ಗೆ 07 ಗಂಟೆಯಿAದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* 110/11ಕೆ.ವಿ ಶ್ರೀಧರಗಡ್ಡೆ ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಫೀಡರ್‌ಗಳು ಮತ್ತು 33/11ಕೆ.ವಿ ಗುಡದೂರು ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಎಲ್ಲಾ 11ಕೆ.ವಿ. ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ