ಶನಿವಾರ, ಜುಲೈ 19, 2025
ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ; ಜು.20 ರಂದು 56ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಜು.19(ಕರ್ನಾಟಕ ವಾರ್ತೆ):
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಹಾಗೂ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ, ಕುಡತಿನಿ ಇವರ ವತಿಯಿಂದ ಜು.20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೆ.ಎಸ್.ಆರ್.ಟಿ.ಸಿ ಹೊಸ ಬಸ್ ನಿಲ್ದಾಣದ ಹತ್ತಿರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ 56ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಉದಯ್ ನಾಯಕ್.ಎನ್ ಅಧ್ಯಕ್ಷತೆ ವಹಿಸುವರು.
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕಾಮಗಾರಿ)ದ ನಿವೃತ್ತ ಮುಖ್ಯ ಅಭಿಯಂತರರ ನಿಂಗಣ್ಣ ಟಿ.ಆರ್., ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಫೈರ್ ಮ್ಯಾನ್)ದ ನಿವೃತ್ತ ಹಿರಿಯ ಸಹಾಯಕ ಉಮಾಕಾಂತ್.ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಮುಖ್ಯ ಅಭಿಯಂತರರ ಜೋತಿಲಕ್ಷಿö್ಮ ಸಿ.ಎನ್., ಮುಖ್ಯ ಅಭಿಯಂತರರ (ಇಂಧನ ನಿರ್ವಹಣೆ) ಅಶೋಕ ಬಮನಳ್ಳಿ, ಮುಖ್ಯ ಅಭಿಯಂತರರ (ಕಾಮಗಾರಿ) ಅಶೋಕ್ ಕುಮಾರ್.ಹೆಚ್., ಪ್ರಧಾನ ಪ್ರಬಂಧಕ (ಹಣಕಾಸು) ಶಿವಲಾಲ್ ಜಿ. ನಾಯಕ್, ಉಪ ಪ್ರಧಾನ ಪ್ರಬಂಧಕಿ ನಾಗವೇಣಮ್ಮ ಸೇರಿದಂತೆ ಕುಡತಿನಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಸಂಸ್ಥಾಪನಾ ದಿನಾಚರಣೆ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ