ಶುಕ್ರವಾರ, ಜುಲೈ 18, 2025

ಬಳ್ಳಾರಿ: ಜುಲೈ-2025 ಮಾಹೆಯ ಪಡಿತರ ವಿತರಣೆ

ಬಳ್ಳಾರಿ,ಜು.18(ಕರ್ನಾಟಕ ವಾರ್ತೆ): ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಜುಲೈ-2025 ಮಾಹೆಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಜುಲೈ 2025 ರ ಮಾಹೆಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯಡಿ ಬಳ್ಳಾರಿ ಜಿಲ್ಲೆಯ ಕೇಂದ್ರ ವ್ಯಾಪ್ತಿಯ ಪ್ರತಿ ಅಂತ್ಯೋದಯ (ಎಎವೈ) ಪಡಿತರ ಚೀಟಿಗೆ 21 ಕೆ.ಜಿ ಜೋಳ ಮತ್ತು 14 ಕೆ.ಜಿ ಸಾರವರ್ಧಿತ ಅಕ್ಕಿ ಹಾಗೂ ಕೇಂದ್ರ ವ್ಯಾಪ್ತಿಯ ಪಿ.ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 03 ಕೆ.ಜಿ ಜೋಳ ಮತ್ತು 02 ಕೆ.ಜಿ ಸಾರವರ್ಧಿತ ಅಕ್ಕಿ ವಿತರಿಸಲಾಗುವುದು. ಇದರ ಜೊತೆಗೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಮಾರ್ಗಸೂಚಿಯಂತೆ ಏಕ ಸದಸ್ಯ, ದ್ವಿ ಸದಸ್ಯ ಮತ್ತು ತ್ರಿ ಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಕೇಂದ್ರ ಮತ್ತು ರಾಜ್ಯ ವ್ಯಾಪ್ತಿಯ ಅಂತ್ಯೋದಯ(ಎಎವೈ) ಮತ್ತು ಪಿ.ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 05 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು. ಹಾಗೂ ರಾಜ್ಯ ಪಡಿತರ ಚೀಟಿ ಫಲಾನುಭವಿಗಳಿಗೆ ಜೋಳದ ಬದಲು ಪೂರ್ಣ ಪ್ರಮಾಣದಲ್ಲಿ ಅಕ್ಕಿ ವಿತರಿಸಲಾಗುವುದು. ಒಂದು ರಾಷ್ಟç ಒಂದು ಪಡಿತರ ಚೀಟಿ(ಅಂತರ್ ರಾಜ್ಯ/ ಅಂತರ್ ಜಿಲ್ಲೆ) ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ನ್ಯಾಯಬೆಲೆ ಅಂಗಡಿದಾರರು ಕಡಿಮೆ ಪ್ರಮಾಣದ ಪಡಿತರ ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರರ ಕಚೇರಿ ಅಥವಾ ಜಿಲ್ಲೆಯ ಉಪನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಬಹುದು. ಈ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲೀ ಅಥವಾ ಸಂಗ್ರಹಣೆ ಮಾಡುವುದು ಕಂಡುಬAದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಅಂತಹ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ