ಗುರುವಾರ, ಜುಲೈ 24, 2025
ಜು.25 ರಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಬಳ್ಳಾರಿಗೆ
ಬಳ್ಳಾರಿ,ಜು.24(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿಗಳು ಜು.25 ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 9 ಗಂಟೆಗೆ ಬಳ್ಳಾರಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಕಾರ್ಮಿಕರು, ಪೌರಕಾರ್ಮಿಕರು ಮತ್ತು ಗುರುತಿಸಿದ ಮ್ಯಾನ್ಯುವಲ್ ಸ್ಕಾö್ಯವೆಂಜರ್ ಮತ್ತು ಮೃತಪಟ್ಟ ಮ್ಯಾನ್ಯುವಲ್ ಸ್ಕಾö್ಯವೆಂಜರ್ ಅವಲಂಬಿತರೊAದಿಗೆ ನೇರ ಸಂವಾದ ನಡೆಸುವರು.
ಬಳಿಕ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರೊಂದಿಗೆ ನೇರ ಸಂವಾದ ಮತ್ತು ಕುಂದುಕೊರತೆಗಳ ಬಗ್ಗೆ ಪರಿಶೀಲನೆ ಸಭೆ ನಡೆಸುವರು.
ಸಂಬAಧಿಸಿದ ಫಲಾನುಭವಿಗಳು, ಸಂಘ-ಸAಸ್ಥೆಗಳ ಪದಾಧಿಕಾರಿಗಳು ಕುಂದುಕೊರತೆಗಳ ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು-ಕೊರತೆಗಳ ಅಹವಾಲು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ