ಸೋಮವಾರ, ಜುಲೈ 28, 2025
ಜು.30 ರಂದು ವಿಶ್ರೀಕೃ ವಿಶ್ವವಿದ್ಯಾಲಯ 16ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಜು.28(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 16ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮವನ್ನು ಜು.30 ರಂದು ಬೆಳಿಗ್ಗೆ 9.30 ಗಂಟೆಗೆ ವಿಶ್ವವಿದ್ಯಾಲಯದ ಬಯಲು ರಂಗಮAದಿರ ಆವರಣದಲ್ಲಿ ಆಯೋಜಿಸಲಾಗಿದೆ.
ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಆಂಧ್ರಪ್ರದೇಶದ ಕೇಂದ್ರೀಯ ಗಿರಿಜನ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ.ತೇಜಸ್ವಿ ವಿ.ಕಟ್ಟಿಮನಿ ಅವರು ದಿಕ್ಷÆಚಿ ಭಾಷಣ ಮಾಡುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಧಾರವಾಡದ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಮುಖ್ಯ ಆಡಳಿತಾಧಿಕಾರಿ ಎಸ್.ಎನ್.ರುದ್ರೇಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಶ್ರೀಕೃ ವಿಶ್ವವಿದ್ಯಾಲಯದ ಕುಲಸಚಿವ ನಾಗರಾಜು.ಸಿ., ಕುಲಸಚಿವ(ಮೌಲ್ಯಮಾಪನ) ಪ್ರೊ.ಎನ್.ಎಂ.ಸಾಲಿ, ಹಣಕಾಸು ಅಧಿಕಾರಿ ನಾಗರಾಜ, ಕಾರ್ಯಕ್ರಮ ಸಂಯೋಜಕ ಪ್ರೊ.ಎನ್.ಶಾಂತನಾಯ್ಕ್ ಸೇರಿದಂತೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ ಸದಸ್ಯರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುವರು.
ಕಾರ್ಯಕ್ರಮದ ನಂತರ ಬೆಂಗಳೂರಿನ ಡಾ.ಅಪ್ಪಗೆರೆ ತಿಮ್ಮರಾಜು ಅವರಿಂದ ಜಾನಪದ ಗೀತೆ, ವಿಜಯನಗರ ಜಿಲ್ಲೆಯ ಗೊಲ್ಲರಹಳ್ಳಿಯ ರಾಮವ್ವ ಜೋಗತಿ ತಂಡದಿAದ ಜೋಗತಿ ನೃತ್ಯ, ಕಂಪ್ಲಿಯ ಆರ್.ಶೀಲಾ ತಂಡದವರಿAದ ಆದಿವಾಸಿ ಬುಡಕಟ್ಟು ಹಕ್ಕಿ-ಪಿಕ್ಕಿ ನೃತ್ಯ, ಬಳ್ಳಾರಿಯ ಚಂದ್ರಶೇಖರ ತಂಡದವರಿAದ ಡೊಳ್ಳು ಕುಣಿತ, ಬಳ್ಳಾರಿಯ ಜಿ.ಮೋಹನ ತಂಡದವರಿAದ ತಾಷಾರಾಂ ಡೋಲು, ಬಳ್ಳಾರಿಯ ಎಂ.ನಾಗರಾಜ ತಂಡದವರಿAದ ವೀರಗಾಸೆ ನೃತ್ಯ ಒಳಗೊಂಡAತೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ