ಸೋಮವಾರ, ಜುಲೈ 28, 2025
ಜು.31 ರಂದು ವಿವಿಧ ಮಹನೀಯರ ಜಯಂತಿ ಆಚರಣೆಯ ಪೂರ್ವಭಾವಿ ಸಭೆ
ಬಳ್ಳಾರಿ,ಜು.28(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಆ.09 ರಂದು ನುಲಿಯ ಚಂದಯ್ಯ, ಆ.16 ರಂದು ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಚರಣೆ ಕುರಿತಂತೆ ಜುಲೈ 31 ರಂದು ಬೆಳಿಗ್ಗೆ 11.30 ಗಂಟೆಗೆ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಅಧ್ಯಕ್ಷತೆ ವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ