ಸೋಮವಾರ, ಜುಲೈ 28, 2025

ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು.28(ಕರ್ನಾಟಕ ವಾರ್ತೆ): ಕೃಷಿ ಇಲಾಖೆ ವತಿಯಿಂದ 2025-26ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ ನಲ್ಲಿ ಸಿಟಿಜನ್ ಲಾಗಿನ್ ಅಥವಾ ಆರ್‌ಎಸ್‌ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ಸೇವಾ ಕೇಂದ್ರ ಅಥವಾ ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್‌ಐಡಿ ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಕೃಷಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಮುಂಗಾರು ಹಂಗಾಮಿಗೆ ಆಗಸ್ಟ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ