ಬುಧವಾರ, ಜುಲೈ 16, 2025
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಜು.16(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ಗೆ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿಗೆ ರೂ.1 ಲಕ್ಷ ಒಳಗಿರಬೇಕು.
ವಿದ್ಯಾರ್ಥಿಗಳು ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 8050770004, 8050770005 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ