ಬುಧವಾರ, ಜುಲೈ 2, 2025

ಡಿ.ಇಡಿ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.02(ಕರ್ನಾಟಕ ವಾರ್ತೆ): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷದ ವಿಶೇಷ ಡಿ.ಇಡಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಅವರು ತಿಳಿಸಿದ್ದಾರೆ. ಆಸಕ್ತರು ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರಬೇಕು. ಅಂಧ ಮತ್ತು ಶ್ರವಣ ದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟಿçÃಯ ಪುನರ್ವಸತಿ ಮಂಡಳಿಯ ಪಠ್ಯಕ್ರಮ ಹಾಗೂ ಮಾರ್ಗಸೂಚಿಯಯಂತೆ ಡಿಪ್ಲೋಮೋ ಇನ್ ಸ್ಪೇಷಲ್ ಎಜುಕೇಷನ್, ಡಿಪ್ಲೋಮೋ ಇನ್ ಸ್ಪೇಷಲ್ ಎಜುಕೇಷನ್ ತರಬೇತಿಯನ್ನು ಕನ್ನಡ ಮಾದ್ಯಮದಲ್ಲಿ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂ.0821-2491600, ಮೊ.9113561620, 9686762378, 7829115275, 9743503262, 9611773697, 6362962400 ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಕಛೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ