ಸೋಮವಾರ, ಜುಲೈ 7, 2025
ಕರ್ನಾಟಕ ಸಾಹಿತ್ಯ ಅಕಾಡೆಮಿ: ಮೂರು ದಿನಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಜು.07(ಕರ್ನಾಟಕ ವಾರ್ತೆ):
ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಡಿ ಮೂರು ದಿನಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಶಿಬಿರವು ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಯಲಿದ್ದು, ಶಿಬಿರದಲ್ಲಿ ಆಸಕ್ತಿಯುಳ್ಳ 20 ರಿಂದ 40 ವರ್ಷದ ಹೊಂದಿದವರು ಪ್ರಸ್ತುತ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸುವವರು ಹಾಗೂ ಪತ್ರಿಕೋದ್ಯಮ ಪದವಿ ಪಡೆದವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ.
ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://sahithyaacademy.karnataka.gov.in ಗೆ ಭೇಟಿ ನೀಡಿ ಅರ್ಜಿ ನಮೂನೆ ಹಾಗೂ ವಿವರ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಜೆ.ಸಿ ರಸ್ತೆಯ ಕನ್ನಡ ಭವನದ 2ನೇ ಮಹಡಿಯ ಕರ್ನಾಟಕ ಸಾಹಿತ್ಯ ಅಕಾಡೆಮಿ ಕಚೇರಿ ಅಥವಾ ದೂ.080-22211730, 29601730, 22106460 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾçರ್ ಕರಿಯಪ್ಪ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ