ಮಂಗಳವಾರ, ಜುಲೈ 22, 2025

ಯುವಕ ನಾಪತ್ತೆ: ಪತ್ತೆಗೆ ಮನವಿ

ಬಳ್ಳಾರಿ,ಜು.22(ಕರ್ನಾಟಕ ವಾರ್ತೆ): ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಲಬುರ್ಗಿ ಜಿಲ್ಲೆಯ ಚಿಂಚೋಳ್ಳಿ ತಾಲ್ಲೂಕಿನ ಸಲಗರ ಬಸಂತಪುರ ಗ್ರಾಮದ ಶಿವರಾಮ ನಾಯಕ ತಾಂಡದ ನಿವಾಸಿಯಾದ ರಾಹುಲ್ ಎನ್ನುವ 24 ವರ್ಷದ ಯುವಕ ಜು.17 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಉಪ-ನಿರೀಕ್ಷಕರು ಮನವಿ ಮಾಡಿದ್ದಾರೆ. ಚಹರೆ: 5.8 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ತೆಳ್ಳನೇಯ ಮೈಕಟ್ಟು, ಕಪ್ಪು ಕೂದಲು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಟೀ-ಶರ್ಟ್, ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ. ಬಿಳಿಯ ಕನ್ನಡಕ ಹಾಕಿರುತ್ತಾನೆ. ಯುವಕ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯ ದೂ.08392-276063, ಮೊ.9480802131 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ