ಶುಕ್ರವಾರ, ಜುಲೈ 25, 2025
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಜು.25(ಕರ್ನಾಟಕ ವಾರ್ತೆ):
ತಾಲ್ಲೂಕಿನ ಬೈರದೇವವನಹಳ್ಳಿ ಗ್ರಾಮದ ತಿಪ್ಪೇಸ್ವಾಮಿ ಎನ್ನುವ 30 ವರ್ಷದ ವ್ಯಕ್ತಿಯು ಹಂಚಿನಾಳ ಗ್ರಾಮಕ್ಕೆ ಮೋಹರಂ ಹಬ್ಬಕ್ಕೆ ಹೋಗಿಬರುತ್ತೇನೆ ಎಂದು ಜು.05 ರಂದು ಹೇಳಿಹೋದವನು ಮನೆಗೆ ಬಾರದೇ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಮೋಕ ಪೊಲೀಸ್ ಠಾಣೆಯ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಎತ್ತರ 5.7 ಅಡಿ, ಗೋಧಿ ಮೈಬಣ್ಣ ಹೊಂದಿದ್ದು, ಎಡಗೈ ಮೇಲೆ ಸುಟ್ಟ ಗಾಯದ ಕಲೆ, ಎಡಗಾಲಿಗೆ ಗಾಯದ ಕಲೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಅಂಗಿ, ನೀಲಿ ಕಲರ್ ಪ್ಯಾಂಟ್‌ನ್ನು ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಮೋಕಾ ಪೊಲೀಸ್ ಠಾಣೆಯ ಪಿ.ಎಸ್.ಐ ಮೊ.9480803050, ದೂ.08392-293228, ಸಿರುಗುಪ್ಪ ಉಪವಿಭಾಗ ಡಿಎಸ್‌ಪಿ ಅವರ ಮೊ.9480803021, ಪಿಡಿ ಹಳ್ಳಿ ವೃತ್ತ ಸಿಪಿಐ ಅವರ ಮೊ.9480803031 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ