ಬುಧವಾರ, ಜುಲೈ 30, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಅರ್ಜಿ ಆಹ್ವಾನ

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆನ್‌ಲೈನ್ ವೆಬ್‌ಸೈಟ್ https://ssp.postmatric.karnataka.gov.in/ ಗೆ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ