ಶನಿವಾರ, ಜುಲೈ 19, 2025

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ನೋಂದಣಿಗೆ ಆಹ್ವಾನ

ಬಳ್ಳಾರಿ,ಜು.19(ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಂತ ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಒಂದು ದಿನದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಆಸಕ್ತರಿಂದ ನೋಂದಣಿಗೆ ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಇನ್ನೀತರ ವಿಷಯಗಳ ಕುರಿತು ತರಬೇತಿ ನೀಡಲಾಗುವುದು. ನೋಂದಾಯಿಸಿಕೊಳ್ಳಲು ಸಿಡಾಕ್ ಜಂಟಿ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಮೂಲಕ ನೋಂದಾಯಿಸಿಕೊಳ್ಳಬಹುದು. ಯುವಕ-ಯುವತಿ ಮತ್ತು ಮಹಿಳೆಯರು ಸಹ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ರಸ್ತೆಯ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡದ ಸಿಡಾಕ್ ಜಂಟಿ ನಿರ್ದೇಶಕರ ಕಚೇರಿ ಅಥವಾ ಮೊ.9449226221, 7483538942 ಗೆ ಸಂಪರ್ಕಿಸಬಹುದು ಎಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ