ಬುಧವಾರ, ಜುಲೈ 2, 2025

ಯೋಜನಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು.02(ಕರ್ನಾಟಕ ವಾರ್ತೆ): ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೇವದಾಸಿ ಪುನರ್ವಸತಿ ಯೋಜನಾ ಕಚೇರಿಯಲ್ಲಿ ಪ್ರಸ್ತಕ ಸಾಲಿಗೆ ಖಾಲಿ ಇರುವ ಯೋಜನಾಧಿಕಾರಿಗಳ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯೋಜನಾಧಿಕಾರಿಗಳ ಒಂದು ಹುದ್ದೆಗೆ ಎಂ.ಎ., ಎಂ.ಎಸ್.ಡಬ್ಲೂö್ಯ., ಎಂ.ಎ ಇನ್ ಸೋಶಿಯಾಲಜಿ, ಎಂ.ಎಸ್ಸಿ ಇನ್ ಸೈಕಾಲಾಜಿ ಪದವಿ ಹೊಂದಿರಬೇಕು. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. 65 ವರ್ಷದೊಳಗಿರುವ ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಕಚೇರಿಯಲ್ಲಿ ಅರ್ಜಿ ಪಡೆದು ನಿಗದಿತ ವಿದ್ಯಾರ್ಹತೆಯ ದಾಖಲೆ ಹಾಗೂ ಅನುಭವದ ಮೂಲ ಪ್ರಮಾಣ ಪತ್ರಗಳೊಂದಿಗೆ ಜುಲೈ 12 ರೊಳಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಎಸ್.ಪಿ.ಸರ್ಕಲ್ ಹತ್ತಿರದ ಮಹಿಳಾ ಪೋಲಿಸ್ ಠಾಣೆ ಪಕ್ಕದಲ್ಲಿನ ಸ್ತಿçà ಸೇವಾನಿಕೇತನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ