ಮಂಗಳವಾರ, ಜುಲೈ 29, 2025

ಸಿರುಗುಪ್ಪ ನಗರಸಭೆ: ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ 2019-20 ರಿಂದ 2025-26ನೇ ಸಾಲಿನ ಎಸ್.ಎಫ್.ಸಿ ಯೋಜನೆ ಮತ್ತು ನಗರಸಭೆ ನಿಧಿಯಡಿ ಶೇ.24.10 (ಎಸ್‌ಸಿಎಸ್‌ಪಿ, ಟಿಎಸ್‌ಪಿ), ಶೇ.7.25 ಮತ್ತು ಶೇ.5 ಅನುದಾನದಡಿ ವಿವಿಧ ಯೋಜನೆಗಳಡಿ ಸೌಲಭ್ಯಗಳಿಗಾಗಿ ಸಿರುಗುಪ್ಪ ನಗರದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಷ್ಟ್ 25 ಕೊನೆಯ ದಿನ. *ಸೌಲಭ್ಯಗಳು:* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕ ಖರೀದಿಸಲು ಸಹಾಯಧನ ಮತ್ತು ಎಂ.ಬಿ.ಬಿ.ಎಸ್ ಹಾಗೂ ಬಿ.ಇ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಸಲು ಸಹಾಯಧನ. ಪರಿಶಿಷ್ಟ ಪಂಗಡ ವರ್ಗದ ಅರ್ಹರಿಗೆ ವೈಯಕ್ತಿಕ ಶೌಚಾಲಯಕ್ಕೆ ನಿರ್ಮಾಣಕ್ಕೆ ಸಹಾಯಧನ. ಇತರೆ ಹಿಂದುಳಿದ ವರ್ಗಗಳ ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕ ಖರೀದಿಸಲು ಮತ್ತು ಎಂ.ಬಿ.ಬಿ.ಎಸ್ ಹಾಗೂ ಬಿ.ಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಸಲು, ಪಕ್ಕಾ ಮನೆ ನಿರ್ಮಾಣಕ್ಕೆ, ವೈಯಕ್ತಿಕ ಶೌಚಾಲಯಕ್ಕೆ ನಿರ್ಮಾಣಕ್ಕೆ ಸಹಾಯಧನ. ವಿಶೇಷ ಚೇತನರಿಗೆ ಪಕ್ಕಾ ಮನೆ ನಿರ್ಮಾಣ, ಶೌಚಾಲಯ ನಿರ್ಮಾಣ ಮತ್ತು ಹೊಸದಾಗಿ ವಾರ್ಷಿಕ ಜೀವವಿಮೆ, ಎಲೆಕ್ಟಿçಕಲ್ ದ್ವಿಚಕ್ರ ಸ್ಕೂಟಿ ಪಡೆಯಲು ಸಹಾಯಧನ ನೀಡಲಾಗುವುದು. *ಬೇಕಾದ ದಾಖಲೆ:* ನಿಗದಿತ ಅರ್ಜಿ ನಮೂನೆ, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಐ.ಡಿ ಕಾರ್ಡ್, 2 ಫೋಟೋ, ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಸೌಲಭ್ಯ ಪಡೆಯದೇ ಇರುವ ಬಗ್ಗೆ ದೃಢೀಕರಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ಬಿ.ಇ, ಎಂ.ಬಿ.ಬಿ.ಎಸ್ ಮಾಡುತ್ತಿರುವ ಬಗ್ಗೆ ದೃಢೀಕರಣ ಪತ್ರ, ಪಕ್ಕಾ ಮನೆ/ಶೌಚಾಲಯ ನಿರ್ಮಾಣಕ್ಕಾಗಿ ಅರ್ಜಿದಾರರ ಹೆಸರಿನಲ್ಲಿರುವ ಆಸ್ತಿಯ ದಾಖಲೆಗಳು, ಅಂಗವಿಕಲತೆ ಇದ್ದಲ್ಲಿ ವೈದ್ಯಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ನಗರಸಭೆ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಸಿರುಗುಪ್ಪ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ