ಗುರುವಾರ, ಜುಲೈ 17, 2025

ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಲಿ

ಬಳ್ಳಾರಿ,ಜು.17(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಹೆಚ್ಚಾಗಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಗುರುವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೊಲೀಸ್ ಇಲಾಖೆಯಿಂದ ಗ್ರಾಮ ಸಭೆಗಳಲ್ಲಿ, ಶಿಕ್ಷಣ ಇಲಾಖೆ ವತಿಯಿಂದ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗಳಲ್ಲಿಯೂ ಸಹ ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಅರಿವು ಮೂಡಿಸುವ ಕೆಲಸವಾಗಬೇಕು ಎಂದು ತಿಳಿಸಿದರು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಇತರೆ ಇಲಾಖೆಗಳ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಬಾಲ್ಯವಿವಾಹ ಹಾಗೂ ಪೋಕ್ಸೋ ಕಾಯ್ದೆ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಬೇಕು. ಇಲಾಖೆಗಳು ಮತ್ತು ವಿವಿಧ ಸಂಘ-ಸAಸ್ಥೆಗಳ ಸಹಕಾರ ಪಡೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಬೇಟಿ ಬಚಾವೋ-ಬೇಟಿ ಪಡಾವೋ ಯೋಜನೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗುವ ದಿಸೆಯಲ್ಲಿ ಲಿಂಗಾನುಪಾತ ಕಡಿಮೆ ಇರುವ ತಾಲೂಕು ಹಾಗೂ ಗ್ರಾಮ ಪಂಚಾಯತ್‌ಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು. ಜಿಲ್ಲೆಯಲ್ಲಿ 6 ವರ್ಷದೊಳಗಿನ ಮಕ್ಕಳ ಕುಂಠಿತ ಬೆಳವಣಿಗೆ, ತೂಕ ನಿಯಂತ್ರಣ ಅಪೌಷ್ಠಿಕತೆ, ರಕ್ತಹೀನತೆ ತಡೆಗಟ್ಟುವಿಕೆ ಕುರಿತಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೋಷಣ್ ಅಭಿಯಾನ ಯೋಜನೆಯಿದ್ದು, ಫಲಾನುಭವಿಗಳನ್ನು ಗುರುತಿಸಿ ಪೋಷಣ್ ಟ್ರಾö್ಯಕರ್ ತಂತ್ರಾAಶದಲ್ಲಿ ಆಧಾರ್ ಸೀಡಿಂಗ್ ಮಾಹಿತಿಯನ್ನು ತಪ್ಪಿಲ್ಲದಂತೆ ನಮೂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅನಾಥ, ನಿರ್ಗತಿಕ, ಪೊಲೀಸ್‌ರಿಂದ ಅಭಿರಕ್ಷಣೆಗಾಗಿ ದಾಖಲಾದ ಮಹಿಳೆಯರು ಆಶ್ರಯ ಪಡೆಯಲು ಜಿಲ್ಲೆಯಲ್ಲಿ ಬಳ್ಳಾರಿಯಲ್ಲಿ ರಾಜ್ಯ ಮಹಿಳಾ ನಿಲಯವಿದ್ದು, ಅವರ ಆರೈಕೆಗಾಗಿ ಸಿಬ್ಬಂದಿಗಳ ಕೊರತೆಯಿದ್ದಲ್ಲಿ ಸಂಬAಧಿಸಿದ ವಿಭಾಗದ ಅಧಿಕಾರಿಗಳಿಗೆ ಪತ್ರ ಬರೆಯಬೇಕು ಎಂದು ಸಂಸ್ಥೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕುಟುಂಬಗಳಲ್ಲಿ ಯಾವುದೇ ಬಗೆಯ ಸಮಸ್ಯೆಗಳಲ್ಲಿ ಹಿಂಸೆಗೊಳಗಾದ ಮಹಿಳೆಯರಿಗೆ ಸಂಬAಧಿಸಿದAತೆ ದೌಜನ್ಯಕ್ಕೊಳಗಾದ ಮಹಿಳೆಯರನ್ನು ರಕ್ಷಿಸಲು ಜಿಲ್ಲಾ ಮಟ್ಟದಲ್ಲಿ ಸಂರಕ್ಷಣಾಧಿಕಾರಿಯನ್ನು ನೇಮಿಸಲಾಗಿದ್ದು, ಮಹಿಳೆಯರ ಉಚಿತ ಸಹಾಯವಾಣಿ ಸಂಖ್ಯೆ 181 ನ್ನು ಗ್ರಾಮಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ಹೆಚ್ಚಾಗಿ ಪ್ರಚಾರ ನೀಡಬೇಕು ಎಂದರು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ದೌರ್ಜನ್ಯ, ಮಹಿಳೆಯರ ಮತ್ತು ಮಕ್ಕಳ ಸಾಗಾಟ, ಕೌಟುಂಬಿಕ ದೌರ್ಜನ್ಯ, ಬಾಲ್ಯವಿವಾಹ ಸೇರಿದಂತೆ ವಿವಿಧ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್, ಬಾಲಕಿಯರ ವಸತಿ ನಿಲಯ, ದಮನಿತ ಮಹಿಳೆಯರ/ಟ್ರಾನ್ಸ್ ಜೆಂಡರ್ಸ್, ಸಾಂತ್ವನ ಕೇಂದ್ರಗಳು ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಜರುಗಿತು. ಈ ಸಂದರ್ಭದಲ್ಲಿ ಬಳ್ಳಾರಿ ನಗರ ಡಿಎಸ್ಪಿ ಚಂದ್ರಕಾAತ ನಂದಾರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಎಲ್ಲಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ