ಗುರುವಾರ, ಜುಲೈ 24, 2025

ಜಿಟಿಟಿಸಿ: ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.24(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಾಲ್ಯಾಭಿವೃದ್ದಿ ಕೇಂದ್ರದಲ್ಲಿ ಹತ್ತನೇ ತರಗತಿ ಉತ್ತೀರ್ಣರಾದ ಯುವಕರಿಗೆ ‘ಟೂಲರೂಮ್ ಮಶಿನಿಸ್ಟ್’ ತಾಂತ್ರಿಕ ದೀರ್ಘಾವಧಿ ವೃತ್ತಿ ತರಬೇತಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಒಂದೇ ಕೋರ್ಸಿನಲ್ಲಿ ಫಿಟ್ಟರ್, ಟರ್ನರ್, ಮಿಲ್ಲರ್, ಗ್ರೆöÊಂಡರ್, ಸಿಎನ್‌ಸಿ, ಕ್ಯಾಡ್-ಕ್ಯಾಮ್ ಮತ್ತು ಟೂಲ್ ಆಂಡ್ ಡೈ ಮೇಕಿಂಗ್ ಟ್ರೇಡ್‌ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಜೊತೆಗೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲ್ಪಿಸಲಾಗುತ್ತದೆ. ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಶಿಕ್ಷಕರನ್ನು ಹೊಂದಿದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ, ಮತ್ತು ಅಟೊಮೊಬೈಲ್ ವಲಯಗಳ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುವುದು. ಸರ್ಕಾರದ ವಿವಿಧ ಯೋಜನೆಯಡಿ “ಮೆಕ್ಯಾನಿಕಲ್–ಕ್ಯಾಡ್/ಕಾಮ್”, “ಎಲೆಕ್ಟಾçನಿಕ್ಸ್- ಅಟೋಮೇಶನ್ ಮನೆ/ಕೈಗಾರಿಕೆ, ಪಿ.ಎಲ್.ಸಿ ಪ್ರೋಗ್ರಾಮಿಂಗ್, ಅಡ್ವಾನ್ಸ್ ಹೈಡ್ರಾಲಿಕ್ಸ್ ಮತ್ತು ನ್ಯೂಮ್ಯಾಟಿಕ್ಸ್”, “ಎಲೆಕ್ಟಿçಕಲ್- ಮನೆ/ಕೈಗಾರಿಕೆ ಇನ್ಸಾಲೇಷನ್, ಸಿಕ್ಯಾಡ್ ಮತ್ತು ಕಂಪ್ಯೂಟರ್ ಸೈನ್ಸ್ - ಕಂಪ್ಯೂಟರ್ ಅಪ್ಲಿಕೇಷನ್ ವಿಭಾಗದ ಉಚಿತ ಮತ್ತು ಪಾವತಿ ತಾಂತ್ರಿಕ ಕೌಶಲ್ಯ ಅಲ್ಪಾವಧಿ ತರಬೇತಿಗಳನ್ನು ಪ್ರಾರಂಭಿಸಲಾಗುತ್ತಿದೆ. ಕನಿಷ್ಠ 8ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ, ಬಿ.ಇ ಉತ್ತೀರ್ಣರಾದ 16 ರಿಂದ 35 ವಯೋಮಿತಿಯೊಳಗಿನ ಅಭ್ಯರ್ಥಿಗಳು ತರಬೇತಿ ಪಡೆಯಲು ಅರ್ಹರು. ತರಬೇತಿ ಪಡೆಯಲು ಆದಾಯದ ಮಿತಿ ಇರುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅಲ್ಪಾವಧಿ ಮತ್ತು ದೀರ್ಘಾವಧಿ ತರಬೇತಿಗಳು ಉಚಿತವಾಗಿರುತ್ತದೆ. ಡಿಪ್ಲೋಮಾ ಮತ್ತು ಇಂಜಿನಿಯರಿAಗ್ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್ ನ ಐಶ್ವರ್ಯ ಕಾಲೋನಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಐ.ಟಿ.ಐ. ಕ್ಯಾಂಪಸ್) ಅಥವಾ ಮೊ.9972320076, 9620057086 ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ